ಬೆಂಗಳೂರು:ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಆಕ್ರಮಣಕಾರಿಯಾಗಿ ವರ್ತಿಸಬೇಡಿ ಎಂದು ತಮಿಳುನಾಡು ಸರ್ಕಾರದ ಜಲಸಂಪನ್ಮೂಲ ಸಚಿವ ದೊರೈ ಮುರುಗನ್​ ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ಒಂದನ್ನು ಹೊರಡಿಸಿರುವ ದೊರೈ ಮುರುಗನ್​ ಮೇಕೆದಾಟು ಯೋಜನೆಯನ್ನು ತಮಿಳುನಾಡು ಜನತೆ ಹಾಗೂ ಸರ್ಕಾರ ವಿರೋಧಿಸುವುದಾಗಿ ಪುನರುಚ್ಚರಿಸಿದ್ದಾರೆ.
ಅಧೀಕಾರಕ್ಕೆ ಬಂದು ಕೆಲವೇ ದಿನಗಳು ಕಳೆದಿವೆ. ಅಷ್ಟರಲ್ಲೇ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಆಕ್ರಮಣಕಾರಿಯಾಗಿ ವರ್ತಿಸುತ್ತಿರುವುದು ಆಶ್ವರ್ಯಕರವೆನಿಸಿದೆ. ಮೇಕೆದಾಟು ಯೋಜನೆ ಕುರಿತು ಅಧಿಕಾರಿಗಳು ಅವರಿಗೆ ಸಮರ್ಪಕವಾಗಿ ಮಾಹಿತಿ ನೀಡಿಲ್ಲ ಎಂದು ಕಾಣುತ್ತದೆ.
ಇದನ್ನೂ ಓದಿ:ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ
ನಾನು ಈ ವಿಚಾರದ ಕುರಿತು ಶಿವಕುಮಾರ್​ ಅವರನ್ನು ಭೇಟಿ ಮಾಡಿ ವಿವರಿಸುತ್ತೇನೆ ಅಲ್ಲಿಯವರೆಗೂ ಅವರು ತಾಳ್ಮೆಯಿಂದ ಇರುತ್ತಾರೆ ಎಂದು ಭಾವಿಸುತ್ತೇನೆ.
ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಗೆದ್ದು ಅಧಿಕಾರದ ಗದ್ದುಗೆ ಏರಿದ ವಿಚಾರವಾಗಿ ಶಿವಕುಮಾರ್​ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲು ಯೋಜಿಸಿದ್ದೆ. ಈಗ ಅವರ ಆಕ್ರಮಣಕಾರಿ ನಡವಳಿಕೆಯಿಂದ ಪ್ರಕಟಣೆ ಮೂಲಕ ಶುಭಾಶಯವನ್ನು ಕೋರುತ್ತಿದ್ದೇನೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್​ ಹೇಳಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:one × two =
Remember me
