ನವದೆಹಲಿ:ಇಡಿ ವಿಶ್ವವನ್ನೇ ಬಾಧಿಸುತ್ತಿರುವ ಕರೊನಾ ಪಿಡುಗು ಮುಂದಿನ ಸಾಲಿನ ಕೇಂದ್ರ ಬಜೆಟ್​ ಮೇಲೂ ತನ್ನ ಪರಿಣಾಮ ಬೀರುವುದು ನಿಶ್ಚಿತವಾಗಿದೆ. ಆದರೂ, 2021ರ ಮಾರ್ಚ್​ 31ರವರೆಗೆ ಬೇರಾವುದೇ ಜನಪ್ರಿಯ ಕಾರ್ಯಕ್ರಮಗಳನ್ನು ನಿರೀಕ್ಷಿಸಬೇಡಿ ಎಂದು ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ದೇಶದ ಜನತೆಗೆ ಮಾಹಿತಿ ನೀಡಿದ್ದಾರೆ.
ಕೋವಿಡ್​-19 ಸಂಕಷ್ಟದಿಂದ ಪಾರು ಮಾಡಲು ಕೇಂದ್ರ ಸರ್ಕಾರ ಈಗಾಗಲೆ 20 ಲಕ್ಷ ಕೋಟಿ ರೂ. ಆರ್ಥಿಕ ಪುನಶ್ಚೇತನ ಕಾರ್ಯಕ್ರಮವನ್ನು ಘೋಷಿಸಿದೆ. ಪ್ರಧಾನ ಮಂತ್ರಿ ಗರೀಬ್​ ಕಲ್ಯಾಣ ಯೋಜನೆ, ಆತ್ಮನಿರ್ಭರ ಭಾರತ ಅಭಿಯಾನ ಯೋಜನೆ ಹಾಗೂ ಮತ್ತಿತರ ವಿಶೇಷ ಕಲ್ಯಾಣ ಯೋಜನೆಗಳಲ್ಲಿ ಈಗಾಗಲೆ ಘೋಷಿಸಲಾಗಿರುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಇನ್ನೊಂದು ವರ್ಷ ಬೇರಾವುದೇ ಜನಪ್ರಿಯ ಕಾರ್ಯಕ್ರಮಗಳ ಘೋಷಣೆಯನ್ನು ನಿರೀಕ್ಷಿಸಬೇಡಿ ಎಂದು ಸ್ಪಷ್ಟಪಡಿಸಿದರು.
ಜನವರಿಯಿಂದ ಮಾರ್ಚ್​ವರೆಗಿನ ತ್ರೈಮಾಸಿಕದ ಅವಧಿಯಲ್ಲಿ ಭಾರತದ ಆರ್ಥಿಕ ಪ್ರಗತಿ ಶೇ.3.1 ದಾಖಲಾಗಿದೆ. ಈ ಅವಧಿಯಲ್ಲಿ ಬೆಳವಣಿಗೆಯ ವೇಗ ತುಂಬಾ ಕುಂಠಿತವಾಗಿತ್ತು. ಕೋವಿಡ್​-19 ಲಾಕ್​ಡೌನ್​ನಿಂದಾಗಿ ಪ್ರಗತಿಯ ವೇಗ ಮತ್ತಷ್ಟು ಕುಂಠಿತವಾಗುವುದು ನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ 2021ರ ಮಾರ್ಚ್​ವರೆಗೆ ಅಥವಾ ಮುಂದಿನ ಆದೇಶದವರೆಗೆ ಹೆಚ್ಚಿನ ಕಲ್ಯಾಣ ಕಾರ್ಯಕ್ರಮಗಳನ್ನು ಘೋಷಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಯುಪಿಎಸ್​ಸಿ ಪ್ರಿಲಿಮಿನರಿ ಪರೀಕ್ಷೆ ಯಾವಾಗ? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 10 =
Remember me
