ಬೆಂಗಳೂರು:ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಸಮಸ್ಯೆ ಬಗೆಹರಿಯಬೇಕೆಂದರೆ ನದಿ ಕೊಳ್ಳದಲ್ಲಿ ವ್ಯಾಪಕ ಗಿಡ ಮರಗಳನ್ನು ಬೆಳೆಸಬೇಕು ಎಂದು ಇಶಾ ಫೌಂಡೇಷನ್​ನ ಮುಖ್ಯಸ್ಥರಾಗಿರುವ ಸದ್ಗುರು ಜಗ್ಗಿ ವಾಸುದೇವ ಅವರು ಸಲಹೆ ಕೊಟ್ಟಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ಕಾವೇರಿ ಮಾತೆಗೆ ನಾವು ಯಾವ ರಾಜ್ಯದವರು ಎಂದು ತಿಳಿದಿಲ್ಲ. ಆದರೆ, ಬೇಸಿಗೆಯಲ್ಲಿ ಅವಳು ಬತ್ತಿ ಹೋಗಿ ಹರಿಯುವುದನ್ನು ನಿಲ್ಲಿಸುತ್ತಾಳೆ. ಕಾವೇರಿ ಕೊಳ್ಳದ ಸುಮಾರು 83,000 ಚದರ ಕಿಲೋಮೀಟರ್ ವ್ಯಾಪ್ತಿಯ ಭೂಮಿಯಲ್ಲಿ ಮರ-ಗಿಡಗಳನ್ನು ಬೆಳೆಸುತ್ತಾ ಕೃಷಿ ಮಾಡುವುದೇ ಕಾವೇರಿ ನೀರಿನ ಸಮಸ್ಯೆಗೆ ಪರಿಹಾರ ಎಂದಿದ್ದಾರೆ.
Mother Cauvery does not know which state we belong to but she is suffering with depletion and drying up during the summer months. Bringing large scale tree based agriculture and vegetating the 83,000 sq kms of Cauvery basin is the only way Cauvery will flow 12 months of the year…
ಇದನ್ನೂ ಓದಿ:ಜನತ್-2 ನಟಿಗೆ ಕಾಸ್ಟಿಂಗ್​ ಕೌಚ್​; ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಇಶಾ ಗುಪ್ತಾ
ಮರ-ಗಿಡಗಳನ್ನು ಬೆಳೆಸುವುದರಿಂದ ಮಾತ್ರ ಕಾವೇರಿ ವರ್ಷಪೂರ್ತಿ ತುಂಬಿ ಹರಿಯುವಳು ಪ್ರಸ್ತುತ ಸಮಸ್ಯೆಗೆ ಇದು ಪರಿಹಾರವಾಗಬಹುದು. ಬದಲಿಗೆ ಹೋರಾಟಗಳಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಸದ್ಗುರು ಜಗ್ಗಿ ವಾಸುದೇವ ಸಾಮಾಜಿಕ ಜಾಲತಾಣ ಎಕ್ಸ್​ ಮೂಲಕ ಸಲಹೆ ನೀಡಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಸೆಪ್ಟೆಂಬರ್​ 29ರಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿದ್ದವು. ಬಂದ್​ನ ನ​ಡುವೆಯೇ ಕನ್ನಡಿಗರಿಗೆ CWMA ಅಕ್ಟೋಬರ್​ 15ರವರೆಗೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ ಆದೇಶಿಸುವ ಮೂಲಕ ಕನ್ನಡಿಗರಿಗೆ ಮತ್ತೊಂದು ಶಾಕ್​ ನೀಡಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 7 =
Remember me
