ಬಿಹಾರ:ಎರಡನೇ ಹಂತದ ವಿಧಾನಸಭಾ ಚುನಾವಣೆಯ ಕೊನೆಯ ದಿನದ ಪ್ರಚಾರ ಬಿಹಾರದಿಂದ ಅಯೋಧ್ಯೆವರೆಗೂ ತಲುಪಿದೆ. ಅರ್ಥಾತ್​, ಬಿಹಾರದ ಚುನಾವಣಾ ಪ್ರಚಾರದಲ್ಲಿ ಅಯೋಧ್ಯೆಯ ರಾಮಮಂದಿರ ನಿರ್ಮಾಣ ವಿಷಯ ಪ್ರಸ್ತಾಪವಾಗಿದೆ.
ಬಿಹಾರದ ಪಶ್ಚಿಮ ಚಂಪರಣ್​ನಲ್ಲಿ ಭಾನುವಾರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ಸರಿಯಾಗಿಯೇ ಟೀಕಾಪ್ರಹಾರ ಮಾಡಿದ್ದಾರೆ. ನಾಗರಿಕ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಪಕ್ಷಗಳು ತಪ್ಪು ಮಾಹಿತಿ ಹರಿದುಬಿಡುತ್ತಿವೆ ಎಂದಿರುವ ಮೋದಿ, ಬಳಿಕ ರಾಮನ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.
ಕೆಲವರು ರಾಮನ ಅಸ್ತಿತ್ವವನ್ನು ಪ್ರಶ್ನೆ ಮಾಡಿದ್ದರಿಂದಲೇ ಅಯೋಧ್ಯೆಯಲ್ಲಿನ ರಾಮ ಮಂದಿರ ನಿರ್ಮಾಣ ಪ್ರಕ್ರಿಯೆ ವಿಳಂಬವಾಯಿತು ಎಂದು ಬೇಸರ ವ್ಯಕ್ತಪಡಿಸಿದ ಮೋದಿ, ರಾಮನ ಅಸ್ತಿತ್ವವನ್ನು ಪ್ರಶ್ನೆ ಮಾಡಿದ್ದವರನ್ನು ಬಿಹಾರದ ಜನತೆ ಮರೆಯಬಾರದು ಎಂದು ಕರೆ ನೀಡಿದರು. ಅಲ್ಲದೆ ಜನರ ಸಹಕಾರದಿಂದ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಮೋದಿ ಹೇಳಿದರು. ಜತೆಗೆ ಪ್ರತಿಪಕ್ಷದ್ದು ಜಂಗಲ್ ರಾಜ್​ ಎಂದ ಮೋದಿ, ಎನ್​ಡಿಎಯ ಉತ್ತಮ ಕಾರ್ಯಗಳನ್ನು ಪ್ರಸ್ತಾಪಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. (ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 + 10 =
Remember me
