ಬೆಂಗಳೂರು:ಪ್ರತಿ ವರ್ಷ ತಮಿಳುನಾಡಿನ ವಿಡುದಲೈ ಚಿರುದೈಗಳ್ (ವಿಸಿಕೆ) ಪಕ್ಷ ನೀಡುವ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಸಿದ್ದರಾಮಯ್ಯನವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ.
ತಮಿಳುನಾಡಿನ ವಿಡುದಲೈ ಚಿರುದೈಗಳ್ (ವಿಸಿಕೆ) ಪಕ್ಷ ಪ್ರತಿ ವರ್ಷ ನೀಡುವ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಈ ಬಾರಿ ನನ್ನನ್ನು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಧನ್ಯವಾದಗಳು. ಪಕ್ಷದ ಸಂಸದರಾದ ತಿರುಮಾವಲವನ್ ಅವರು ಇಂದು ನನ್ನನ್ನು ಭೇಟಿ ಮಾಡಿ ಪ್ರಶಸ್ತಿ ಸ್ವೀಕರಿಸಲು ಜುಲೈ 30 ರಂದು ಚೆನ್ನೈಗೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಇದರ ಜತೆಗೆ ವಿಸಿಕೆ ಪಕ್ಷದ ‘ಪೆರಿಯಾರ್ ಒಲಿ’ ಪ್ರಶಸ್ತಿಯನ್ನು ಮಾನವ ಹಕ್ಕುಗಳ ಹೋರಾಟಗಾರ ಹಾಗೂ ಬರಹಗಾರ ಎಸ್.ವಿ. ರಾಜದೊರೈ ಅವರು ಸ್ವೀಕರಿಸಲಿದ್ದಾರೆ. ‘ಕಾಮರಸರ್ ಕತಿರ್’ ಪ್ರಶಸ್ತಿಗೆ ಕೈಗಾರಿಕೋದ್ಯಮಿ ವಿ.ಜಿ. ಸಂತೋಷಂ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನು ‘ಐಯೋತಿ ಥಾಸ್ ಆಧವನ್’ ಪ್ರಶಸ್ತಿಗೆ ಮಾಜಿ ಐಎಎಸ್ ಅಧಿಕಾರಿ ಚೆಲ್ಲಪ್ಪನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಸಿಕೆ ಪಕ್ಷದ ಸಂಸ್ಥಾಪಕ ಥೊಲ್ ತಿರುಮಾವಲವನ್ ತಿಳಿಸಿದ್ದಾರೆ.
ತಮಿಳುನಾಡಿನ ವಿಡುದಲೈ ಚಿರುದೈಗಳ್ (ವಿಸಿಕೆ) ಪಕ್ಷ ಪ್ರತಿ ವರ್ಷ ನೀಡುವ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಈ ಬಾರಿ ನನ್ನನ್ನು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಧನ್ಯವಾದಗಳು. ಪಕ್ಷದ ಸಂಸದರಾದ ತಿರುಮಾವಲವನ್ ಅವರು ಇಂದು ನನ್ನನ್ನು ಭೇಟಿ ನೀಡಿ ಪ್ರಶಸ್ತಿ ಸ್ವೀಕರಿಸಲು ಜುಲೈ 30ರಂದು ಚೆನ್ನೈಗೆ ಆಗಮಿಸುವಂತೆ ಆಹ್ವಾನ ನೀಡಿದರು.pic.twitter.com/2wDvgZTKD5
— Siddaramaiah (@siddaramaiah)July 22, 2022

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 3 =
Remember me
