ಬೆಂಗಳೂರು:ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆ ತರಲಾಗುತ್ತಿದೆ. ಅವರು ಶ್ರೀಲಂಕಾದ ಕೊಲಂಬೊಗೆ ತೆರಳಿದ್ದ ವೇಳೆ ಈ ಲಘು ಹೃದಯಾಘಾತವಾಗಿದ್ದು, ವಿಮಾನದ ಮೂಲಕ ಅವರನ್ನು ಬೆಂಗಳೂರಿಗೆ ಕರೆತಂದು ನಾರಾಯಣ ಹೃದಯಾಲಯದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.
ಸಂಜೆ 5.30ರ ಸುಮಾರಿಗೆ ಅವರನ್ನು ಬೆಂಗಳೂರಿನ ಎಚ್​ಎಎಲ್ ವಿಮಾನ ನಿಲ್ದಾಣಕ್ಕೆ ಕರೆ ತರಲಿದ್ದು, ಅಲ್ಲಿಂದ ಜೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯಕ್ಕೆ ಕರೆದೊಯ್ಯಲಾಗುವುದು. ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ.ದೇವಿ ಶೆಟ್ಟಿ ಅವರು ಚಿಕಿತ್ಸೆ ನೀಡಲಿದ್ದು, ಅವರ ಆರೋಗ್ಯ ಪರಿಸ್ಥಿತಿ ಕುರಿತು ನಿಗಾ ಇರಿಸಿದ್ದಾರೆ.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ಕಸ್ತೂರಿರಂಗನ್ ಅವರಿಗೆ 83 ವರ್ಷ ವಯಸ್ಸಾಗಿದ್ದು, ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳಿಗೂ ಅವರು ಭಾಜನರಾಗಿರುತ್ತಾರೆ.
ಶೀಘ್ರ ಚೇತರಿಕೆಗಾಗಿ ಸಿಎಂ ಹಾರೈಕೆ:ಕಸ್ತೂರಿರಂಗನ್ ಅವರಿಗೆ ಹೃದಯಾಘಾತ ಆಗಿರುವುದಕ್ಕೆ ಸಿಎಂ ಸಿದ್ದರಾಮಯ್ಯ ದುಃಖ ವ್ಯಕ್ತಪಡಿಸಿದ್ದು, ಅವರು ಕೂಡಲೇ ಚೇತರಿಸಿಕೊಂಡು ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಒಂದೇ ಕುಟುಂಬದ ಆರು ಮಂದಿ ಸಾವು; ತಿರುಪತಿ ದೇವಸ್ಥಾನದಿಂದ ಮರಳುವಾಗ ಅಪಘಾತ!

ಒಂದು ದಿನ ಕಳೆದ ಮೇಲೆ ಗೊತ್ತಾಯ್ತು ಜೋಡಿ ಕೊಲೆ!; ದಂಪತಿಯನ್ನು ಕೊಚ್ಚಿ ಬರ್ಬರ ಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
