ನವದೆಹಲಿ:ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಡಾ.ಎಸ್​.ಎಲ್. ಭೈರಪ್ಪ, ಮೂರ್ತಿ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ, ಡಾ.ಖಾದರ್, ಸಂಗೀತ ಸಂಯೋಜಕ ಎಂ.ಎಂ.ಕೀರವಾಣಿ ಸೇರಿದಂತೆ ಹಲವರಿಗೆ ಇಂದು ಪದ್ಮಪ್ರಶಸ್ತಿಗಳನ್ನು ನೀಡಲಾಯಿತು.
ಪ್ರಸಕ್ತ ಸಾಲಿನ ಪದ್ಮಪ್ರಶಸ್ತಿಗಳನ್ನು ಜನವರಿಯಲ್ಲಿ ಘೋಷಿಸಲಾಗಿದ್ದು, ಈಗಾಗಲೇ ಮಾಜಿ ಸಿಎಂ ಎಸ್​.ಎಂ.ಕೃಷ್ಣ ಸೇರಿದಂತೆ ಹಲವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಉಳಿದ ಕೆಲವರಿಗೆ ಇಂದು ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು.
ಇದನ್ನೂ ಓದಿ:ಎಸ್‌ಎಂ ಕೃಷ್ಣ, ಎಸ್‌ಎಲ್ ಭೈರಪ್ಪ, ಸುಧಾಮೂರ್ತಿ ಸೇರಿದಂತೆ 8 ಕನ್ನಡಿಗರಿಗೆ ಪದ್ಮ ಪುರಸ್ಕಾರ ಪ್ರಕಟ
ಎಸ್​.ಎಲ್. ಭೈರಪ್ಪ, ಸುಧಾಮೂರ್ತಿ ಅವರು ಇಂದು ಪದ್ಮಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸ್ವೀಕರಿಸಿದರು. ಹಾಗೆಯೇ ‘ಮಿಲೆಟ್ ಮ್ಯಾನ್ ಆಫ್ ಇಂಡಿಯಾ’ ಎಂದೇ ಹೆಸರಾಗಿರುವ ಡಾ.ಖಾದರ್, ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು’ ಗೀತೆ ಖ್ಯಾತಿಯ ಎಂ.ಎಂ.ಕೀರವಾಣಿ ಅವರಿಗೆ ಇಂದು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇವರೊಂದಿಗೆ ದೇಶದ ವಿವಿಧೆಡೆಯ ಇನ್ನೂ ಕೆಲವು ಸಾಧಕರು ಕೂಡ ಪದ್ಮಪ್ರಶಸ್ತಿ ಸ್ವೀಕರಿಸಿದರು.
ಇದನ್ನೂ ಓದಿ:ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಎಸ್​.ಎಂ.ಕೃಷ್ಣ; ದೆಹಲಿಯಲ್ಲಿ ರಾಷ್ಟ್ರಪತಿಯಿಂದ ಪ್ರದಾನ
ದೇಶದಲ್ಲಿ ಈ ಸಲ ಒಟ್ಟು 106 ಮಂದಿಯನ್ನು ಪದ್ಮಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಆ ಪೈಕಿ 6 ಸಾಧಕರನ್ನು ಪದ್ಮವಿಭೂಷಣ, 9 ಸಾಧಕರನ್ನು ಪದ್ಮಭೂಷಣ ಮತ್ತು 91 ಸಾಧಕರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಮನ ‘ಮುಟ್ಟು’ವ ಕಾರ್ಯ: ಮನೆಯೊಡತಿಗೆ ಮುಟ್ಟಾದಾಗ ರಾಣಿಯಂತೆ ನೋಡಿಕೊಳ್ಳುತ್ತಿರುವ ಗಂಡ-ಗಂಡುಮಕ್ಕಳು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
