ಮುಂಬೈ:ನಿರ್ಮಾಣ ಹಂತದಲ್ಲಿದ್ದ ಚತುಷ್ಪಥ ಹೆದ್ದಾರಿಯ ಮೇಲ್ಸೇತುವೆ ಕುಸಿದಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲುನ್​ನಲ್ಲಿ ನಡೆದಿದೆ. ಮುಂಬೈ-ಗೋವಾ ನಡುವಿನ ಚತುಷ್ಪಥ ಹೆದ್ದಾರಿಯ ಮೇಲ್ಸೇತುವೆಯ ಒಂದು ಭಾಗ ಕುಸಿದಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಮೇಲ್ಸೇತುವೆ ಕುಸಿತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಳಪೆ ಕಾಮಗಾರಿಯೇ ಸೇತುವೆ ಕುಸಿತಕ್ಕೆ ಕಾರಣ ಎಂದು ಹಲವರು ದೂರಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ಚಿಪ್ಲುನ್​ ಪ್ರದೇಶದಲ್ಲಿ ಮುಂಬೈ ಹಾಗೂ ಗೋವಾಗೆ ಸಂಪರ್ಕ ಕಲ್ಪಿಸುವ ಚತುಷ್ಪಥ ಹೆದ್ದಾರಿಯ ಮೇಲ್ಸೇತುವೆಯ ಒಂದು ಭಾಗ ಕುಸಿದಿದೆ. ಮೇಲ್ನೋಟಕ್ಕೆ ಕಳಪೆ ಕಾಮಗಾರಿ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಒಂದು ವೇಳೆ ಕಾಮಗಾರಿಯಲ್ಲಿ ಯಾವುದಾದರು ಲೋಪದೋಷ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH| Maharashtra | A pillar at the under-construction site of Mumbai-Goa four-lane highway collapsed today morning in Chiplun. Soon after, a portion of the flyover also collapsed, damaging a crane machine that was being used at the site. No injuries or casualties were…pic.twitter.com/m5iVsXCPhi
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 1 =
Remember me
