ಅಹಮದಾಬಾದ್​:ಗುಜರಾತ್​ ವಿಧಾನಸಭಾ ಚುನಾವಣೆಯ ಮತ ಹಂಚಿಕೆಯಲ್ಲಿ ಈ ಬಾರಿ ಭಾರಿ ಬದಲಾವಣೆಯಾಗಿದೆ. ಬಿಜೆಪಿ ಮತಗಳಿಕೆಯಲ್ಲಿ ಏರಿಕೆಯಾಗಿದ್ದು, ಕಾಂಗ್ರೆಸ್​ ಮತ ಗಳಿಕೆಯಲ್ಲಿ ಕುಸಿತು ಕಂಡಿದೆ.
ಇದೇ ಮೊದಲ ಬಾರಿಗೆ ಗುಜರಾತ್​ ಚುನಾವಣೆಯಲ್ಲಿ ಸ್ಪರ್ಧಿಸಿರುವ ಆಮ್​ ಆದ್ಮಿ ಪಕ್ಷ ಗಮನಾರ್ಹ ಸಾಧನೆ ಮಾಡಿದೆ. ಆದರೆ, ಬಿಜೆಪಿ ಪ್ರಬಲ ಪೈಪೋಟಿ ನೀಡಲಿದೆ ಎಂಬ ಮಾತುಗಳು ಮಾತ್ರ ಹುಸಿಯಾಗಿದ್ದು, ಬಿಜೆಪಿಗೆ ಬದಲಾಗಿ ಕಾಂಗ್ರೆಸ್​ ಪಕ್ಷಕ್ಕೆ ಎಎಪಿ ಮಗ್ಗಲು ಮುಳ್ಳಾಗಿದೆ.
ಈ ಬಾರಿ ಕಾಂಗ್ರೆಸ್​ ಮತಗಳು ಬಿಜೆಪಿ ಮತ್ತು ಎಎಪಿಗೆ ವಿಭಜನೆಯಾಗಿದೆ. ಶೇ. 55ರಷ್ಟು ಮತ ಗಳಿಸಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಆದರೆ, ಕಾಂಗ್ರೆಸ್​ ಮತಗಳಿಕೆ ಶೇ. 27ರಿಂದ 15ಕ್ಕೆ ಕುಸಿತ ಕಂಡಿದೆ. ಇದೇ ಮೊದಲ ಬಾರಿಗೆ ಗುಜರಾತ್​ ಚುನಾವಣಾ ಅಖಾಡಕ್ಕೆ ಇಳಿದಿರುವ ಎಎಪಿ ಶೇ. 13 ಮತ ಗಳಿಕೆಯೊಂದಿಗೆ ಮೊದಲ ಬಾರಿಗೆ ಎಲ್ಲರ ಗಮನ ಸೆಳೆದಿದೆ.
ಮತ ಎಣಿಕೆಯ ಸದ್ಯದ ಟ್ರೆಂಡ್​ ಪ್ರಕಾರ ಗುಜರಾತ್​ನಲ್ಲಿ ಆಡಳಿತಾರೂಢ ಬಿಜೆಪಿ 158 ಸ್ಥಾನಗಳಲ್ಲಿ ಮುಂದಿದ್ದರೆ, ಕಾಂಗ್ರೆಸ್​ 18, ಎಎಪಿ 7 ಮತ್ತು ಇತರೆ 5 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಒಟ್ಟು 182 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಗುಜರಾತ್​ನಲ್ಲಿ ಅಧಿಕಾರ ರಚನೆಗೆ 92 ಮ್ಯಾಜಿಕ್​ ನಂಬರ್​ ಬೇಕಿದೆ. ಆದರೆ, ಬಿಜೆಪಿ ಈಗಾಗಲೇ ಮ್ಯಾಜಿಕ್​ ನಂಬರ್​ ದಾಟಿ ಮುಂದೆ ಸಾಗಿದ್ದು, ಅಧಿಕಾರ ಹಿಡಿಯುವುದು ಖಚಿತವಾಗಿದೆ.(ಏಜೆನ್ಸೀಸ್​)
ಚುನಾವಣಾ ಫಲಿತಾಂಶ: ಗುಜರಾತ್​ನಲ್ಲಿ ಮ್ಯಾಜಿಕ್​ ನಂಬರ್​ ದಾಟಿದ BJP, ಹಿ. ಪ್ರದೇಶದಲ್ಲಿ ಕಾಂಗ್ರೆಸ್​​ ಮುನ್ನಡೆ

ಗುಜರಾತ್​ನಲ್ಲಿ ಭರ್ಜರಿ ಗೆಲುವಿನತ್ತ ಬಿಜೆಪಿ: ಜಯಭೇರಿ ಬಾರಿಸಿದ ಸಿಎಂ ಭೂಪೇಂದ್ರ ಪಟೇಲ್​

ಚುನಾವಣಾ ಫಲಿತಾಂಶ: ಗುಜರಾತ್​ನಲ್ಲಿ ಮ್ಯಾಜಿಕ್​ ನಂಬರ್​ ದಾಟಿದ BJP, ಹಿ. ಪ್ರದೇಶದಲ್ಲಿ ಕಾಂಗ್ರೆಸ್​​ ಮುನ್ನಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
