ಅನಂತಪುರಂ:ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಚಾಲಕ, ಕ್ಲೀನರ್​ ಸೇರಿದಂತೆ 40 ರಾಸುಗಳು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯಲ್ಲಿ ನಡೆದಿದೆ.
ಅನಂತಪುರಂನ ರಾಷ್ಟ್ರೀಯ ಹೆದ್ದಾರಿ 44ರ ಕಾಸೆಪಲ್ಲಿ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದ್ದು, ಚಾಲಕ ಮತ್ತು ಕ್ಲೀನರ್ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪಾಮಿಡಿ ಪೊಲೀಸ್​ ಠಾಣಾಧಿಕಾರಿ ರೋಶನ್, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಡದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ, ಕ್ಲೀನರ್​ ಹಾಗೂ ಲಾರಿಯಲ್ಲಿದ್ದ ಜಾನುವಾರುಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೇನ್‌ಗಳ ಸಹಾಯದಿಂದ ಜಾನುವಾರುಗಳ ಮೃತದೇಹಗಳನ್ನು ಸ್ಥಳದಿಂದ ಹೊರತೆಗೆಯಲಾಯಿತು. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪಾಮಿಡಿ ಪೊಲೀಸ್​ ಠಾಣಾಧಿಕಾರಿ ರೋಶನ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − four =
Remember me
