ಚಂಡೀಗಢ:ಮಾದಕವಸ್ತುವಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಿಂಗ್‌ಪಿನ್ ಜಗದೀಶ್ ಸಿಂಗ್ ಅಲಿಯಾಸ್ ಭೋಲಾ ಸೇರಿದಂತೆ 17 ಮಂದಿಯನ್ನು ಪಂಜಾಬ್‌ನ ಮೊಹಾಲಿಯ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಮಂಗಳವಾರ (ಜುಲೈ 30)ದೋಷಿ ಎಂದು ಘೋಷಿಸಿದೆ.
ಇದನ್ನು ಓದಿ:ಜಮ್ಮು-ಜೋಧ್‌ಪುರ ಎಕ್ಸ್​​ಪ್ರೆಸ್​​ಗೆ ಬಾಂಬ್ ಬೆದರಿಕೆ: ರೈಲು ಸಂಚಾರ ಸ್ಥಗಿತ.. ಮುಂದುವರಿದ ಶೋಧ ಕಾರ್ಯ
ವಿಶೇಷ ನ್ಯಾಯಾಲಯವು ಜಗದೀಶ್ ಸಿಂಗ್ ಅಲಿಯಾಸ್ ಭೋಲಾಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ 50,000 ರೂಪಾಯಿ ದಂಡ ವಿಧಿಸಿದೆ. ಅದು ವಿಫಲವಾದರೆ ಅವರು ಇನ್ನೂ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿಲಾಗಿದೆ.
ಜಗದೀಶ್ ಭೋಲಾ ಜತೆಗೆ ಮನ್‌ಪ್ರೀತ್, ಸುಖರಾಜ್ ಸುಖ್‌ಜೀತ್ ಸುಖ್ ಮತ್ತು ಮಣಿಂದರ್‌ಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಭೋಲಾ ಅವರ ಪತ್ನಿ ಗುರುಪ್ರೀತ್ ಕೌರ್ ಅವರಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು 23 ಆರೋಪಿಗಳಿದ್ದು, ಈ ಪೈಕಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಆರೋಪಿಗಳನ್ನು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಪಂಜಾಬ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಎಂಟು ಎಫ್‌ಐಆರ್‌ಗಳ ಆಧಾರದ ಮೇಲೆ ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡು 2013ರಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ಆರಂಭಿಸಿತ್ತು. ಬಹುಕೋಟಿ ಸಿಂಥೆಟಿಕ್ ನಾರ್ಕೋಟಿಕ್ ದಂಧೆಯಲ್ಲಿ 23 ಜನರನ್ನು ಆರೋಪಿಗಳೆಂದು ಹೆಸರಿಸಿ 2015ರಲ್ಲಿ ಚಾರ್ಜ್​ಶೀಟ್​ ಸಲ್ಲಿಸಿತ್ತು. ಪ್ರಕರಣದಲ್ಲಿ 95 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ.(ಏಜೆನ್ಸೀಸ್​​)
ಅಭಿವೃದ್ಧಿ ಹೊಂದಿದ ದೇಶವಾಗಿ ಭಾರತ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸಲಿದೆ; ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − two =
Remember me
