ಅಹಮದಾಬಾದ್​:ಕುಡಿದ ಮತ್ತಿನಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತನೋರ್ವ ಕ್ಷುಲಕ ಕಾರಣಕ್ಕೆ ಬೀದಿ ಬದಿ ವ್ಯಾಪಾರಿ ಒಬ್ಬರ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಗುಜರಾತಿನ ರಾಜ್​ಕೋಟ್​ನಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಕರಣ್ ಸೊರಥಿಯಾ (25) ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಗಾಯಾಳು ವನರಾಜ್​ ಚಾವಡ(32)ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಭಕ್ತಿನಗರ ಪೊಲೀಸ್​ ಠಾಣಾಧಿಕಾರಿ ಮಯೂರ್​ಧ್ವಜ ಸಿನ್ಹಾ ಸರ್ವಯ್ಯ ಘಟನೆಯೂ ಬುಧವಾರ ರಾತ್ರಿ 9 ಘಂಟೆ ಸುಮಾರಿಗೆ ರಾಜ್​ಕೋಟ್​ನ ಸೊರಥಿಯವಾಡಿ ಸರ್ಕಲ್​ನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಐವರು ಆರೋಪಿಗಳು ಸುಲಭ್ ಶೌಚಾಲಯದ ಸಿಬ್ಬಂದಿಯನ್ನು ಬೀಗ ಹಾಕಿರುವುದನ್ನು ಪ್ರಶ್ನಿಸಿ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ:ಗಾಯಾಳುವನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್​ಗೆ ಬೆಂಕಿ ಇಟ್ಟ ಬಂಡುಕೋರರು; ಮೂವರು ಸಜೀವ ದಹನ
ಈ ವೇಳೆ ಇದನ್ನು ಗಮನಿಸಿದ ಪಾನ್​ ಅಂಗಡಿ ಮಾಲೀಕ ವನರಾಜ್​ ಜಗಳ ಬಿಡಿಸಲು ಮುಂದಾಗಿದ್ದು, ಹಲ್ಲೆ ನಡೆಸದಂತೆ ಐವರು ಆರೋಪಿಗಳಿಗೆ ತಾಕೀತು ಮಾಡಿದ್ದಾರೆ. ಇದರಿಂದ ಕುಪಿತಗೊಂಡ ಆರೋಪಿಗಳು ವನರಾಜ್​ ಜೊತೆ ಕೆಲಕಾಲ ವಾಗ್ವಾದ ನಡೆಸಿ ಹಲ್ಲೆಗೆ ಯತ್ನಿಸಿದ್ದಾರೆ. ಆರೋಪಿಗಳಿಂದ ತಪ್ಪಿಸಿಕೊಂಡ ವನರಾಜ್​ ಮೇಲೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಕರಣ್ ತನ್ನ ಬಂದೂಕಿನಿಂದ ಗುಂಡನ್ನು ಹಾರಿಸಿದ್ದಾನೆ.
ಗುಂಡೇಟಿನ ಶಬ್ದ ಕೇಳಿ ನೆರೆ ಹೊರೆಯವರು ಘಟನಾ ಸ್ಥಳಕ್ಕೆ ಆಗಮಿಸಿ ಆರೋಪಿ ಬಳಿದ್ದ ಗನ್​ಅನ್ನು ಕಸಿದು ಪೊಲೀಸರಿಗೆ ಕರೆ ವಿಷಯ ಮುಟ್ಟಿಸಿದ್ದಾರೆ. ವಿಚಾರ ತಿಳಿದು ಸ್ಥಳ್ಕಕೆ ದೌಡಾಯಿಸಿದ ಅಧಿಕಾರಿಗಳು ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತ ದಂಡ ಸಂಹಿತೆ(IPC Section) 304, 504 ಅಡಿ ಪ್ರಕರಣ ದಾಖಲಿಸಿಕೊಳ್ಳಾಗಿದೆ ಎಂದು ಭಕ್ತಿನಗರ ಪೊಲೀಸ್​ ಠಾಣಾಧಿಕಾರಿ ಮಯೂರ್​ಧ್ವಜ ಸಿನ್ಹಾ ಸರ್ವಯ್ಯ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
