ಪಟ್ನಾ:ಕುಡಿದ ಮತ್ತಿನಲ್ಲಿ ಪೊಲೀಸ್​ ಅಧಿಕಾರಿಯೋರ್ವ ಜನನಿಬಿಡ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬಿಹಾರದ ಪಟ್ನಾದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ. ಆರೋಪಿ ಅಧಿಕಾರಿ ಶೇರ್​ ಸಿಂಗ್​ನನ್ನು ಸೇವೆಯಿಂದ ಅಮಾನತು ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.
ಇದನ್ನೂ ಓದಿ:IPL 2024; ಲಖನೌ ತೊರೆದು ಮೆಂಟರ್​ ಆಗಿ ಕೆಕೆಆರ್​ಗೆ ಮರಳಿದ ಗೌತಮ್​ ಗಂಭೀರ್
ವಯರಲ್​ ಆಗಿರುವ ವಿಡಿಯೋದಲ್ಲಿ ಕುಡಿದ ಮತ್ತಿನಲ್ಲಿ ಪೊಲೀಸ್​ ಅಧಿಕಾರಿ ತೂರಾಡುತ್ತ ಸಾರ್ವಜನಿಕರಿಂದ ತಪ್ಪಿಸಿಕೊಳ್ಲಲು ಯತ್ನಿಸುತ್ತಿರುವುದನ್ನು ಕಾಣಬುದಾಗಿದೆ. ಈತನ ಬೆನ್ನು ಬಿದ್ದಿರುವ ಸಾರ್ವಜನಿಕರು ಆತನನ್ನು ಥಳಿಸುತ್ತಿದ್ದು, ಬಳಿಕ ಆತ ತಪ್ಪಿಸಿಕೊಂಡು ಪೊಲೀಸ್​ ವಾಹನದಲ್ಲಿ ಕುಳಿತು ರಕ್ಷಣೆ ಪಡೆಯುವುದನ್ನು ನೋಡಬಹುದಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಆರೋಪಿ ಶೇರ್​ ಸಿಂಗ್​ ಎಎಸ್​ಐ ಆಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ. ಈತನ ಬಗ್ಗೆ ಈಗಾಗಲೇ ಹಲವು ಬಾರಿ ದೂರುಗಳು ಕೇಳಿ ಬಂದಿದ್ದು, ಆತನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ವಿಸ್ತೃತ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹಿರಿಯ ಪೊಲೀಸ್​ ಆಫೀಸರ್​ ಒಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 1 =
Remember me
