ಲಖನೌ:ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನೋರ್ವ ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳ ಮುಂಭಾಗ ಬೆತ್ತಲೆಯಾಗಿ ಮಲಗಿರುವ ಘಟನೆ ಉತ್ತರಪ್ರದೇಶದ ಬಹ್ರೈಚ್​ ಜಿಲ್ಲೆಯಲ್ಲಿ ನಡೆದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಶಿಕ್ಷಕನ ಕೃತ್ಯದ ವಿಡಿಯೋ ವೈರಲ್​ ಆಗಿದ್ದು, ಪ್ರಕರಣ ಸಂಬಂಧ ಆತನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಅಮಾನತಾದ ಶಿಕ್ಷಕ ದುರ್ಗಾ ಪ್ರಸಾದ್​ ಜೈಸ್ವಾಲ್​ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಕೇಂದ್ರ ಸಚಿವ ನಿತಿನ್​ ಗಡ್ಕರಿಯನ್ನು ಭೇಟಿಯಾದ ಸತೀಶ್​ ಜಾರಕಿಹೊಳಿ; ಹೆದ್ದಾರಿ ಯೋಜನೆಗಳ ಕುರಿತು ಸುದೀರ್ಘ ಚರ್ಚೆ
ಈ ಕುರಿತು ಪ್ರತಿಕ್ರಿಯಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಅವ್ಯಕ್ತ್​ ರಾಮ್​ ತಿವಾರಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದ ಸತ್ಯಾಸತ್ಯತೆಯನ್ನು ಅರಿಯಬೇಕಿದೆ. ಅಮಾನತಾದ ಶಿಕ್ಷಕ ದುರ್ಗಾ ಪ್ರಸಾದ್​ ವಿದ್ಯಾರ್ಥಿಗಳ ಮುಂಭಾಗ ಅಶ್ಲೀಲವಾಗಿ ವರ್ತಿಸುತ್ತಿದ್ದ ಎಂದು ಸ್ಥಳೀಯರು ಹಾಗೂ ಪೋಷಕರು ದೂರು ನೀಡಿದ್ದರು.
ಶಿಕ್ಷಕನ ವರ್ತನೆಯಿಂದ ಅನೇಕ ವಿದ್ಯಾರ್ಥಿನಿಯರು ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಾರೆ ಎಂದು ಹಲವರು ದೂರಿದ್ದರು. ಈ ಸಂಬಂಧ ತನಿಖೆಗೆ ಆದೇಶಿಸಲಾಗಿತ್ತು. ತನಿಖಾ ವರದಿಯ ಆಧಾರದ ಮೇಲೆ ದುರ್ಗಾ ಪ್ರಸಾದ್​ನನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅವ್ಯಕ್ತ್​ ರಾಮ್​ ತಿವಾರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
