ಲಖನೌ:ಹಬ್ಬದ ದಿನದಂದು ಕೆಲಸ ಮಾಡದೇ ತನ್ನ ಸಹೋದರಿಯೊಂದಿಗೆ ಮಾತನಾಡುತ್ತಿದ್ದರು ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ ಹೆಂಡತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಬುಲಂದರ್​ಶಹರ್​ನಲ್ಲಿ ನಡೆದಿದೆ.
ಸುಶೀಲಾ (45) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಸೆಕ್ಯೂರಿಟಿ ಗಾರ್ಡ್​ ಆಗಿ ಕಾರ್ಯ ನಿರ್ವಹಿಸುತ್ತಿರುವ ಆರೋಪಿ ದೇವಪಾಲ್​ ವರ್ಮಾ (50) ಪೊಲೀಸರಿಗೆ ಶರಣಾಗಿದ್ದಾನೆ.
ಇದನ್ನೂ ಓದಿ:ಹೊಂಬಾಳೆ ಫಿಲಂಸ್​ ಮೂಲಕವೇ ಕರ್ನಾಟಕದಲ್ಲಿ ಬಿಡುಗಡೆಯಾಗಲಿದೆ ಸಲಾರ್
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸುರೇಂದ್ರನಾಥ್​ ತಿವಾರಿ, ದೀಪಾವಳಿ ಪೂಜೆಯ ಬಳಿಕ ಸುಶೀಲಾ ತನ್ನ ಸಹೋದರಿಗೆ ಹಬ್ಬದ ಶೂಭಾಶಯಗಳನ್ನು ತಿಳಿಸಲು ಕರೆ ಮಾಡಿದ್ದಾರೆ. ತುಂಬಾ ಹೊತ್ತು ಮಾತನಾಡುತ್ತಿದ್ದನ್ನು ಗಮನಿಸಿದ ಆರೋಪಿ ದೇವಪಾಲ್​ ಕುಪಿತಗೊಂಡು ತನ್ನ ಬಳಿ ಇದ್ದ ರೈಫಲ್​ನಿಂದ ಆಕೆಯ ಕತ್ತು ಹಾಗೂ ಎದೆಯ ಭಾಗಕ್ಕೆ ಗುಂಡು ಹಾರಿಸಿದ್ದಾನೆ. ತೀವ್ರ ರಕ್ತಸ್ರಾವದಿಂದ ಸುಶೀಲಾ ಸ್ಥಳದಲ್ಲೇ ಮರತಪಟ್ಟಿದ್ದು, ಆರೋಪಿ ಹತ್ತಿರದ ಪೊಲೀಸ್​ ಠಾಣೆಯಲ್ಲಿ ಶರಣಾಗಿದ್ದಾನೆ.
ಘಟನೆ ನಡೆದ ವೇಳೆ ಆತ ಪಾನಮತ್ತನಾಗಿದ್ದ ಎಂದು ತಿಳಿದು ಬಂದಿದೆ. ಇದಲ್ಲದೆ ಆತ ತನ್ನ ಹೆಂಡತಿಯನ್ನು ಶಂಕಿಸುತ್ತಿದ್ದ ಎಂದು ತಿಳಿದು ಬಂದಿದೆ. ದಂಪತಿಯ ಪುತ್ರ ಹಿಮಾಂಶು ನೀಡಿದ ದೂರಿನ ಮೇರೆಗೆ FIR ದಾಖಲಿಸಲಾಗಿದ್ದು, ಚಾರ್ಜ್​ಶೀಟ್​ ಸಿದ್ದಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸುರೇಂದ್ರನಾಥ್​ ತಿವಾರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 6 =
Remember me
