ಅಮೃತಸರ:ಆಘಾತಕಾರಿ ಘಟನೆಯೊಂದರಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಬೀದಿ ನಾಯಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಪಂಜಾಬಿನ ಮೊಗಾ ಜಿಲ್ಲೆಯ ಧರಮ್​ಕೋಟ್​​ ಎಂಬ ಪ್ರದೇಶದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಪ್ರಕರಣ ಸಂಬಂಧ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಏಷ್ಯಾಕಪ್​ 2023 ವೇಳಾಪಟ್ಟಿ ಪ್ರಕಟ; ಸೆ.2ರಂದು ಭಾರತ-ಪಾಕ್​ ಹಣಾಹಣಿ
ಈ ಕುರಿತು ಪ್ರತಿಕ್ರಿಯಿಸಿರುವ ಧರಮ್​ಕೋಟ್​ ಪೊಲೀಸ್​ ಠಾಣಾಧಿಕಾರಿ ಬಲ್ವಿಂದರ್​ ಸಿಂಗ್​ ಬಂಧಿತನನ್ನು ರಾಮ್​ಕುಮಾರ್​ ಎಂದು ಗುರುತಿಸಲಾಗಿದ್ದು, ಇತ್ತೀಚಿಗೆ ಬೀದಿ ನಾಯಿಯೊಂದು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿರುವುದನ್ನು ಗಮನಿಸಿದ ಪ್ರಾಣಿಪ್ರಿಯ ಅಜಯ್​ ಕುಮಾರ್​ ಎಂಬುವವರು ಸಿಸಿಟಿವಿಯನ್ನು ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಅಜಯ್​ಕುಮಾರ್​ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ವಶಕ್ಕೆ ಡೆಯಲಾಗಿದ್ದು, FIR ದಾಖಲಿಸಲಾಗಿದೆ. ವಿಚಾರಣೆ ವೇಳೆ ಆರೋಪಿ ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಬಂಧಿತನ ವಿರುದ್ಧ ಭಾರತ ದಂಡ ಸಂಹಿತೆ(IPC Section) 377 ಹಾಗೂ 11ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಧರಮ್​ಕೋಟ್​ ಪೊಲೀಸ್​ ಠಾಣಾಧಿಕಾರಿ ಬಲ್ವಿಂದರ್​ ಸಿಂಗ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + four =
Remember me
