ಭೋಪಾಲ್​:ಮಕ್ಕಳಿಗೆ ತಿದ್ದಿ, ಬುದ್ದಿ ಹೇಳಬೇಕಾಗಿರುವ ಶಿಕ್ಷಕನೇ ದಾರಿ ತಪ್ಪಿದರೆ ಏನಾಗುತ್ತದೆ ಎಂಬುದಕ್ಕೆ ಈ ಘಟನೆ ಜೀವಂತ ಸಾಕ್ಷಿಯಾಗಿದೆ. ಶಿಕ್ಷಕರ ದಿನಾಚರಣೆಯಂದೇ ಶಿಕ್ಷಕನೋರ್ವ ಕುಡಿದ ಮತ್ತಿನಲ್ಲಿ ಬಾಲಕಿಯರ ಜಡೆ ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯ ರಾಟೋಟಿ ತಾಲ್ಲೂಕಿನ ಸೆಮಲ್ಖೇಡಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಸೆಪ್ಟೆಂಬರ್​ 05ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಶಿಕ್ಷಕನನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
A government school teacher in#MadhyaPradesh’s#Ratlamdistrict was suspended on#TeachersDayon Thursday for cutting a girl’s hair in an inebriated state.District Collector Rajesh Batham said a criminal case will also be registered against the teacher, Veer Singh Medha, for…pic.twitter.com/kvpAFvl2jB
ಇದನ್ನೂ ಓದಿ:ಕಪಿಲ್​, ಜಹೀರ್​ ಅಲ್ಲವೇ ಅಲ್ಲಾ… ಶಮಿಗೆ ಈ ಇಬ್ಬರು ಮಾತ್ರ ನೆಚ್ಚಿನ ಬೌಲರ್​ಗಳಂತೆ
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಶಿಕ್ಷಕ ವೀರ್​ ಸಿಂಗ್​ ಎರಡು ಕೈಗಳಲ್ಲಿ ಕತ್ತರಿಯನ್ನು ಹಿಡಿದಿದ್ದು, ಐದನೇ ತರಗತಿಯ ವಿದ್ಯಾರ್ಥಿನಿ ಸರಿಯಾಗಿ ಓದಲಿಲ್ಲ ಎಂಬ ಕಾರಣಕ್ಕೆ ಆಕೆಯ ಜಡೆಯನ್ನು ಕತ್ತರಿಸುತ್ತಾನೆ. ವಿದ್ಯಾರ್ಥಿನಿ ಅಳುತ್ತಾ ಗೋಗರೆದರೂ ಅವಳತ್ತ ನೋಡದ ಶಿಕ್ಷಕ ತನ್ನ ಪಾಡಿಗೆ ತಾನು ಕೂದಲನ್ನು ಕತ್ತರಿಸುತ್ತಾನೆ.
ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ಬುಡಕಟ್ಟು ಕಲ್ಯಾಣ ಇಲಾಖೆಯ ಸಹಾಯಕ ಆಯುಕ್ತೆ ರಂಜನಾ ಸಿಂಗ್ ಶಿಕ್ಷಕನನ್ನು ಸೇವೆಯಿಂದ ಅಮಾನತು ಮಾಡಿ ತನಿಖೆಗೆ ಆದೇಶಿಸಿದ್ದು, ವಿದ್ಯಾರ್ಥಿಗಳಿಂದ ಹಾಗೂ ಶಾಲೆಯ ಸಿಬ್ಬಂದಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಶಿಕ್ಷಕರ ದಿನಾಚರಣೆಯ ದಿನದಂದು ಈ ಅಮಾನವೀಯ ಘಟನೆ ನಡೆದಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:thirteen + 16 =
Remember me
