ಸಮಸ್ತಿಪುರ:ಮದ್ಯಪಾನ ಮಾಡಲು 100 ರೂ. ಕೊಡಲಿಲ್ಲವೆಂದ ಪತ್ನಿಯ ಮೇಲಿನ ಸಿಟ್ಟಿಗೆ ಹೆತ್ತ ಮಗನನ್ನೆ ಕೊಲೆ ಮಾಡಿರುವ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.ಕೌಶಲ್ ಕುಮಾರ್ ಮೃತ ದುರ್ದೈವಿಯಾಗಿದ್ದು, ಕುಂದನ್ ಕುಮಾರ್ ಸಾಹ್ನಿ (29) ಎಂಬಾತನೇ ಮಗುವನ್ನು ಕೊಲೆಗೈದ ಆರೋಪಿಯಾಗಿದ್ದಾನೆ. ಮಂಗಳವಾರ ಸಂಜೆ ಕೂಲಿ ಕೆಲಸ ಮಾಡಿ ಮನೆಗೆ ಬಂದಿದ್ದ ಆರೋಪಿಯು ಮದ್ಯದ ಅಮಲಿನಲ್ಲಿದ್ದರೂ, ಮತ್ತೆ ಮದ್ಯ ಸೇವಿಸಲು ಪತ್ನಿ ಬಳಿ ಹಣ ಕೇಳಿದ್ದಾನೆ. ಈ ವೇಳೆ ಪತ್ನಿ ಹಣ ನೀಡಲು ನಿರಾಕರಿಸಿದಾಗ ಆತ ಹಲ್ಲೆಗೆ ಯತ್ನಿಸಿದ್ದು, ಅಷ್ಟರಲ್ಲಿ ಪತ್ನಿ ಸ್ಥಳದಿಂದ ಪರಾರಿಯಾಗಿದ್ದಾಳೆ.ಇದನ್ನೂ ಓದಿ:VIDEO| ಉಕ್ಕಿ ಹರಿಯುತ್ತಿದ್ದ ಸೇತುವೆ ಮೇಲೆ ಹುಚ್ಚಾಟ: ನೀರಿನ ರಭಸಕ್ಕೆ ಸಿಲುಕಿದ ಯುವಕರ ಪ್ರಾಣಸಂಕಟಈ ವೇಳೆ ಕೋಪಗೊಂಡ ಆರೋಪಿಯು ಮನೆಯಲ್ಲಿ ಮಲಗಿದ್ದ ಮಗುವನ್ನು ಎತ್ತಿಕೊಂಡು ಮನೆಯ ಹೊರಗಡೆ ಅಡ್ಡಲಾಗಿ ಬಿದ್ದಿದ್ದ ಕಂಬದ ಮೇಲೆ ಮಗುವನ್ನು ಮಲಗಿಸಿ ಕಠಾರಿಯಿಂದ ಕುತ್ತಿಗೆಯನ್ನು ಕತ್ತರಿಸಿದ್ದಾನೆ. ಮಗುವಿನ ಧ್ವನಿ ಕೇಳಿ ತಾಯಿ ಹಾಗೂ ಸುತ್ತಮುತ್ತಲಿನವರು ಘಟನಾ ಸ್ಥಳಕ್ಕೆ ತಲುಪಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗುವನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.ಆದರೆ ಮಗುವಿನ ಗಂಭೀರ ಪರಿಸ್ಥಿತಿಯನ್ನು ಕಂಡ ವೈದ್ಯರು ಉತ್ತಮ ಚಿಕಿತ್ಸೆಗಾಗಿ ಸದರ್ ಆಸ್ಪತ್ರೆ ಸಮಸ್ತಿಪುರಕ್ಕೆ ರವಾನಿಸಿದ್ದು, ಮಂಗಳವಾರ ರಾತ್ರಿ 1 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಘಟನೆ ಬಳಿಕ ಪಾನಮತ್ತ ತಂದೆ ಸ್ಥಳದಿಂದ ಪರಾರಿಯಾಗಿದ್ದು, ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಆತನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − 1 =
Remember me
