ಜಬಲ್ಪುರ್:ರೈಲಿನ ಎಸಿ ಕೋಚ್​​ನ ಸೀಟ್​ ಮೇಲೆ ಕುಡಿದ ಅಮಲಿನಲ್ಲಿ ರೈಲ್ವೆ ಉದ್ಯೋಗಿಯೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ಯ ಹರಿದಾಡುತ್ತಿದ್ದು, ಇದು ಆಗಸ್ಟ್ 9ರ ರಾತ್ರಿ ಜಬಲ್‌ಪುರದಿಂದ ಹಜರತ್ ನಿಜಾಮುದ್ದೀನ್ ನಿಲ್ದಾಣದ ಕಡೆಗೆ ಹೋಗುತ್ತಿದ್ದ ರೈಲಿನ ಎಸಿ ಕೋಚ್ ಬಿ-6ನಲ್ಲಿ ನಡೆದ ಘಟನೆ ಎನ್ನಲಾಗಿದೆ.
ಇದನ್ನೂ ಓದಿ:ಈ ಬೀಜಗಳು ಚಿಕ್ಕದಾದರೂ ಸಹ ಇದರ ಪ್ರಯೋಜನ ಬೆಟ್ಟದಷ್ಟು..!
ಕೋಚ್‌ನಲ್ಲಿ ಪ್ರಯಾಣಿಕರ ಸೀಟಿನಲ್ಲಿ ಮೂತ್ರ ವಿಸರ್ಜನೆ ಮಾಡಿದ ನೌಕರನ ಹೆಸರು ದಶರತ್ ಕುಮಾರ್ ಎಂದು ಹೇಳಲಾಗುತ್ತಿದೆ. ಅವರು ಜಬಲ್ಪುರ್ ರೈಲ್ವೆ ವಿಭಾಗದ ಮೆಕ್ಯಾನಿಕಲ್ ವಿಭಾಗದಲ್ಲಿ ಓಎಸ್ ಆಗಿ ನೇಮಕಗೊಂಡಿದ್ದಾನೆ. ಈತ ಆಗಸ್ಟ್ 10ರಂದು ದೆಹಲಿಯಲ್ಲಿ ಹೊಸ ಪಿಂಚಣಿ ಯೋಜನೆಗಾಗಿ ರಾಷ್ಟ್ರವ್ಯಾಪಿ ಆಂದೋಲನದಲ್ಲಿ ಪಾಲ್ಗೊಳ್ಳಲು ಹೊರಟಿದ್ದು, ಮದ್ಯದ ಅಮಲಿನಲ್ಲಿದ್ದ. ಈತನಿಗೆ ಪ್ರಯಾಣಿಕರ ಸೀಟಿನಲ್ಲಿ ಮೂತ್ರ ವಿಸರ್ಜಿಸುತ್ತಿದ್ದಾರೆಂಬ ಅರಿವೇ ಇರಲಿಲ್ಲ.
ಆದರೆ, ಈ ವೇಳೆ ಅಲ್ಲಿದ್ದ ಪ್ರಯಾಣಿಕರೊಬ್ಬರು ನೌಕರನ ಕೃತ್ಯದ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಜಬಲ್ಪುರ ರೈಲ್ವೆ ವಿಭಾಗದಲ್ಲಿ ಸಂಚಲನ ಉಂಟಾಗಿದ್ದು, ಡಿಆರ್‌ಎಂ ವಿವೇಕ್ ಶೀಲ್ ಈ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಇದೇ ವೇಳೆ ವಿಡಿಯೋ ಮಾಡಿದ ವ್ಯಕ್ತಿಯನ್ನು ಕೂಡ ಶೋಧ ನಡೆಸಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದ ಎಲ್ಲಾ ಸಂಗತಿಗಳು ಬಯಲಾಗಲಿವೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + six =
Remember me
