ಕಾನ್ಪುರ:ಕುಖ್ಯಾತ ರೌಡಿ ವಿಕಾಸ್‌ ದುಬೆಯ ಎನ್‌ಕೌಂಟರ್‌ ಪ್ರಕರಣದ ತನಿಖೆಗಾಗಿ ನಿವೃತ್ತ ಅಥವಾ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ಆಯೋಗವನ್ನು ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠ ವಜಾ ಮಾಡಿದೆ.
ಜುಲೈ 10 ರಂದು ಕಾನ್ಪುರದಲ್ಲಿ ಪೊಲೀಸ್ ಎನ್‌ಕೌಂಟರ್‌ ಸಮಯದಲ್ಲಿ ಮೃತಪಟ್ಟಿರುವ ಕುಖ್ಯಾತ ರೌಡಿಯ ಪ್ರಕರಣದ ಕುರಿತ ತನಿಖೆಗೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ದುಬೆಯನ್ನು ಬಂಧಿಸುವ ಸಲುವಾಗಿ ಜುಲೈ 2ರಂದು ಕಾನ್ಪುರದ ಬಿಕ್ರು ಗ್ರಾಮಕ್ಕೆ ತೆರಳಿದ್ದ ಎಂಟು ಮಂದಿ ಪೊಲೀಸ್‌ ಅಧಿಕಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ರೌಡಿ ಜುಲೈ 10ರಂದು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ.
ಆತನನ್ನು ಕರೆತರುವ ಸಮಯದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಮಾತ್ರವಲ್ಲದೇ ಪೊಲೀಸರಿಗೆ ಶೂಟ್‌ ಮಾಡಲು ಮುಂದಾಗಿದ್ದರಿಂದ ಎನ್‌ಕೌಂಟರ್ ಮಾಡಲಾಗಿತ್ತು. ಆತ ಮೃತಪಟ್ಟಿದ್ದ. ಆದರೆ ಇದು ನಕಲಿ ಎನ್‌ಕೌಂಟರ್‌, ಆತನನ್ನು ಉದ್ದೇಶಪೂರ್ವಕವಾಗಿ ಸಾಯಿಸಲಾಗಿದೆ ಎಂದು ನಂದಿತಾ ಭಾರತಿ ಎನ್ನುವ ವಕೀಲ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ:ಕಾಗೆ ಹಿಕ್ಕೆ ಹಾಕಿತೆಂದು ಎರ್ರಾಬಿರ್ರಿ ಗುಂಡು ಹಾರಿಸಿದ್ದ ದುಬೆ!
ಆದರೆ ಇದಾಗಲೇ ಎನ್‌ಕೌಂಟರ್‌ಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಲು ಉತ್ತರ ಪ್ರದೇಶ ಸರ್ಕಾರ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಆಯೋಗವನ್ನು ರಚಿಸಿದೆ. ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಶಿಕಾಂತ್ ಅಗರವಾಲ್‌ ನೇತೃತ್ವ ವಹಿಸಿದ್ದಾರೆ. ಮಾತ್ರವಲ್ಲದೇ ವಿಕಾಸ್ ದುಬೆ ಮತ್ತು ಪೊಲೀಸರೊಂದಿಗೆ ಆತನ ಸಂಬಂಧದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಶನಿವಾರವೇ ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನೂ ಸರ್ಕಾರ ರಚಿಸಿದೆ. ಈ ಕುರಿತು ಸರ್ಕಾರದ ಪರ ವಕೀಲರು ಕೋರ್ಟ್‌ ಗಮನಕ್ಕೆ ತಂದರು.
ಈ ಹಿನ್ನೆಲೆಯಲ್ಲಿ ಪುನಃ ಆಯೋಗದ ರಚನೆ ಅಗತ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.ಸುಪ್ರೀಂಕೋರ್ಟ್‌ನಲ್ಲಿ ಇಂದು ವಿಚಾರಣೆ:ಈ ನಡುವೆ ದುಬೆ ಎನ್‌ಕೌಂಟರ್‌ ನಕಲಿಯಾಗಿದ್ದು, ಈ ಬಗ್ಗೆ ಸೂಕ್ತ ತನಿಖೆಗೆ ಆದೇಶಿಸುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಅರ್ಜಿ ಇಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಮಗಳ ಪ್ರೇಮಿಯ ಬರ್ಬರ ಹತ್ಯೆ: ಅಪ್ಪ ಸೇರಿ ಮೂವರ ಬಂಧನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × five =
Remember me
