ಒಡಿಶಾ:ಒಡಿಶಾದ ಬೌಧ್‌ನಲ್ಲಿ ಭಾರೀ ಮಳೆಗೆ ನಗರ ಪ್ರದೇಶಗಳು ತತ್ತರಿಸಿದ್ದು, ಹೆದ್ದಾರಿಗಳು ಜಲಾವೃತಗೊಂಡಿದೆ. ಈ ವೇಳೆ ನೀರಿನಿಂದ ತುಂಬಿ ಹರಿಯುತ್ತಿದ್ದ ರಾಷ್ಟ್ರೀಯ ಹೆದ್ದಾರಿ 57 ರಲ್ಲಿ ಸ್ಥಳೀಯ ನಿವಾಸಿಗಳು ಮೀನು ಹಿಡಿಯುವ ಕೆಲಸದಲ್ಲಿ ನಿರತರಾದ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದೆ.
ಇದನ್ನೂ ಓದಿ:ಹೈಕೋರ್ಟ್ ತೀರ್ಪು ಉಲ್ಲಂಘಿಸಿ ಆನೆಗೊಂದಿ ಭಾಗದ ರೆಸಾರ್ಟ್‌ಗಳಲ್ಲಿ ರಾತ್ರಿ ವಹಿವಾಟು!
ನಿರಂತರ ಸುರಿಯುತ್ತಿರುವ ಮಳೆಯಿಂದ ಒಡಿಶಾದ ಹಲವು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ. ದೇಶದ ಹಲವು ರಾಜ್ಯಗಳಲ್ಲಿ ಇದೀಗ ವ್ಯಾಪಕ ಮಳೆಯಾಗುತ್ತಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆ, ಹೆದ್ದಾರಿಗಳು ಭಾರೀ ಮಳೆಗೆ ಉಕ್ಕಿ ಹರಿಯುತ್ತಿದ್ದು, ನಗರದ ನಿವಾಸಿಗಳು ಇದೀಗ ಮೀನು ಹಿಡಿಯುವ ಕೆಲಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ.
ಮೀನುಗಾರಿಕೆ ನಡೆಸುವಲ್ಲಿ ನಾ ಮುಂದು ತಾ ಮುಂದು ಎಂದು ಸ್ಥಳೀಯರು ಪೈಪೋಟಿ ನಡೆಸುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವೈರಲ್ ಆಗಿದೆ,(ಏಜೆನ್ಸೀಸ್).
ಮೆಗಾ ಸ್ಟಾರ್​ ಚಿತ್ರದ ಪ್ರಿ-ರಿಲೀಸ್​ ಈವೆಂಟ್​ಗೆ ಫಿಕ್ಸ್​ ಆಯ್ತು ಸ್ಥಳ, ಸಮಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
