ಜಮ್ಮು ಕಾಶ್ಮೀರ:ಗುರುವಾರ (ನ.02) ಸೆಲ್ಫ್​ ಡಿಫೆನ್ಸ್​ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೊಬ್ಬ ಪೆಪ್ಪರ್ ಸ್ಪ್ರೇ ಸಿಂಪಡಿಸಿದ ಕಾರಣ 13 ವಿದ್ಯಾರ್ಥಿನಿಯರು ಪ್ರಜ್ಞಾಹೀನರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಅವಮಾನ; ಕಿಡಿಗೇಡಿಗಳ ಬಂಧನಕ್ಕೆ ಬಿಜೆಪಿ ಆಗ್ರಹ
ಮೂರ್ಛೆ ಹೋದ 13 ವಿದ್ಯಾರ್ಥಿನಿಯರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೆಲ್ಫ್​ ಡಿಫೆನ್ಸ್​ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಪೆಪ್ಪರ್ ಸ್ಪ್ರೇ ಸಿಂಪಡಿಸಿದ್ದಾನೆ. ಇದರಿಂದ ವಿದ್ಯಾರ್ಥಿನಿಯರು ಪ್ರಜ್ಞಾಹೀನ ಸ್ಥಿತಿಗೆ ತಲುಪಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕಾಶ್ಮೀರ ಜಿಲ್ಲೆಯ ಹಂದ್ವಾರಾ ಪ್ರದೇಶದ ಸರ್ಕಾರಿ ಬಾಲಕಿಯರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಹಗಲಿನಲ್ಲಿ ಸೆಲ್ಫ್​ ಡಿಫೆನ್ಸ್​ ಕಾರ್ಯಕ್ರಮವನ್ನು ನಡೆಸಲಾಗಿತ್ತು. ಘಟನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಹಾಯಕ ಆಸ್ಪತ್ರೆಯ ಉಪ ಅಧೀಕ್ಷಕ ಜಿಎಂಸಿ ಹಂದ್ವಾರ, ಡಾ. ಐಜಾಜ್ ಅಹ್ಮದ್, “13 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆತರಲಾಗಿದೆ. ಚಿಕಿತ್ಸೆ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ” ಎಂದರು,(ಏಜೆನ್ಸೀಸ್).
‘ಮೆಲ್ಲಗೆ’ ಬರಲಿದೆ ನವೆಂಬರ್ 6 ರಂದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − five =
Remember me
