ಇಂಫಾಲ:ಈಶಾನ್ಯ ರಾಜ್ಯಗಳಲ್ಲಿ ಒಂದಾದ ಮಣಿಪುರದಲ್ಲಿ ಸೋಮವಾರ ರಾತ್ರಿ 8.15ರಲ್ಲಿ ಭಾರಿ ಭೂಕಂಪನ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ 5.5 ತೀವ್ರತೆ ದಾಖಲಾಗಿದೆ.
ದೇಶ ಕೋವಿಡ್​-19 ಪಿಡುಗಿನ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲೇ ಭೂಕಂಪನ ಸಂಭವಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಅಸ್ಸಾಂನ ಗುವಾಹಟಿ ಮತ್ತು ಸುತ್ತಮುತ್ತಲ ಪ್ರದೇಶಗಳು, ಮೇಘಾಲಯ, ನಾಗಾಲ್ಯಾಂಡ್​ ಮತ್ತು ಮಿಜೋರಾಂಗಳಲ್ಲೂ ಕಂಪನದ ಅನುಭವವಾಗಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ ಮಣಿಪುರದ ನೈಋತ್ಯ ಭಾಗದ 13 ಕೀ.ಮೀ. ದೂರದಲ್ಲಿರುವ ಮೋಯಿರಾಂಗ್​ ಎಂಬಲ್ಲಿ 40 ಕಿ.ಮೀ. ಆಳದಲ್ಲಿ ಕಂಪನ ಕೇಂದ್ರೀಕೃತವಾಗಿತ್ತು.
ಆಸ್ತಿ ಹಾಗೂ ಪ್ರಾಣ ಹಾನಿಯಾದ ಬಗ್ಗೆ ತಕ್ಷಣವೇ ಮಾಹಿತಿಗಳು ಲಭ್ಯವಾಗಿಲ್ಲ. ಮೇ 22ರಂದು ಕೂಡ ಮಣಿಪುರದಲ್ಲಿ ಭೂಕಂಪನ ಸಂಭವಿಸಿತ್ತು. ರಿಕ್ಟರ್​ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − four =
Remember me
