ನವದೆಹಲಿ:ಇಂದು ರಾಜಧಾನಿ ದೆಹಲಿ ಮತ್ತೊಮ್ಮೆ ಕಂಪಿಸಿದೆ. ಭಾನುವಾರವಷ್ಟೇ ಭೂಕಂಪನದ ಅನುಭವ ಎದುರಿಸಿದ್ದ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಮತ್ತೊಮ್ಮೆ ಭೂಕಂಪ ಸಂಭವಿಸಿಸ ನಡುಕ ಉಂಟಾಗಿ, ತೀವ್ರ ಆತಂಕ ಸೃಷ್ಟಿಯಾಗಿದೆ.
ದೆಹಲಿ ಮಾತ್ರವಲ್ಲದೆ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಕೆಲವು ಪ್ರದೇಶಗಳಲ್ಲೂ ಈ ಭೂಕಂಪ ಸಂಭವಿಸಿದೆ. ಈ ಭೂಕಂಪನದ ಕೇಂದ್ರಬಿಂದು ಅಫ್ಘಾನಿಸ್ತಾನದಲ್ಲಿ ಇತ್ತು ಎಂದು ಹೇಳಲಾಗಿದ್ದು, ಅದರ ತೀವ್ರತೆಗೆ ದೆಹಲಿ ಕೂಡ ಕಂಪಿಸಿದೆ. ಆದರೆ ಇದುವರೆಗೆ ಯಾವುದೇ ಸಾವು-ನೋವು, ಹಾನಿ ಇತ್ಯಾದಿ ವರದಿಯಾಗಿಲ್ಲ ಎನ್ನಲಾಗಿದೆ.
ಅಫ್ಘಾನಿಸ್ತಾನದ ಹಿಂದು ಕುಷ್ ಪ್ರದೇಶದಲ್ಲಿ ಈ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 5.8 ಇತ್ತು. ಸುಮಾರು 189 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರಬಿಂದು ಇತ್ತೆಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸಸ್ (ಜಿಎಫ್​ಝಡ್)​ ವರದಿ ಮಾಡಿದೆ. ಅಫ್ಘಾನ್ ರಾಜಧಾನಿ ಕಾಬೂಲ್, ಇಸ್ಲಾಮಾಬಾದ್​ ಮಾತ್ರವಲ್ಲದೆ, ಪಾಕಿಸ್ತಾನದ ಕೆಲವು ಪ್ರದೇಶ ಹಾಗೂ ದೆಹಲಿಯಲ್ಲಿ ಈ ಕಂಪನ ಉಂಟಾಗಿದೆ ಎಂದು ಜಿಎಫ್​ಝಡ್ ಹೇಳಿದೆ.
ಭಾನುವಾರ ಬೆಳಗಿನ ಜಾವ ಕೂಡ ದೆಹಲಿಯಲ್ಲಿ ಭೂಕಂಪ ಆಗಿದ್ದು, ಅದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.8ರಷ್ಟಿತ್ತು ಎಂದು ನ್ಯಾಷನಲ್ ಸೆಂಟರ್ ಫಾರ್​ ಸೀಸ್ಮಾಲಜಿ ಹೇಳಿದೆ. ಮಾತ್ರವಲ್ಲದೆ ನ. 12ರಂದು ಕೂಡ ದೆಹಲಿಯಲ್ಲಿ ಕಂಪನ ಉಂಟಾಗಿದ್ದು, ನೇಪಾಳದಲ್ಲಿ ಕೇಂದ್ರಬಿಂದು ಹೊಂದಿದ್ದ ಈ ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.4 ವರದಿಯಾಗಿತ್ತು.
ಮನೆ ಬಾಗಿಲಲ್ಲಿ ಕಸ, ಬೆಡ್​ರೂಮ್​ನಲ್ಲಿದ್ದ ಚಿನ್ನಾಭರಣ ನಾಪತ್ತೆ; ಎಚ್ಚರಿಕೆ ಸಾರ್ವಜನಿಕರೇ.. ಈ ಬಗ್ಗೆ ಇರಲಿ ಗಮನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 3 =
Remember me
