ನವದೆಹಲಿ:ಕಳೆದ ಎರಡು ಮೂರು ವಾರಗಳಲ್ಲಿ ಟರ್ಕಿ-ಸಿರಿಯಾದಲ್ಲಿ ಸಂಭವಿಸಿದ ಭೀಕರ ಸರಣಿ ಭೂಕಂಪದಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದರು. ಅಲ್ಲದೆ ಭಾರಿ ಆಸ್ತಿ-ಪಾಸ್ತಿ ಹಾನಿಗೀಡಾಗಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದರ ನಡುವೆ ಭಾರತದಲ್ಲೂ ಸದ್ಯದಲ್ಲೇ ಭಾರಿ ಭೂಕಂಪ ಸಂಭವಿಸಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ನ್ಯಾಷನಲ್​ ಜಿಯೋಫಿಸಿಕಲ್ ರಿಸರ್ಚ್​ ಇನ್​ಸ್ಟಿಟ್ಯೂಟ್​(ಎನ್​ಜಿಆರ್​​ಐ) ತಜ್ಞರು ಈ ಕುರಿತು ಎಚ್ಚರಿಕೆ ನೀಡಿದ್ದಾರೆ. ಹಿಮಾಲಯ ಭಾಗದಲ್ಲಿ ಭೂಕಂಪ ಆಗುವ ಸಾಧ್ಯತೆಗಳಿದ್ದು, ಹಿಮಾಚಲಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭೂಕಂಪನ ಆಗಬಹುದು ಎಂದು ಎನ್​ಜಿಆರ್​ಐ ಮುಖ್ಯ ವಿಜ್ಞಾನಿ ಡಾ.ಎನ್​. ಪೂರ್ಣಚಂದ್ರ ರಾವ್ ಈ ಮುನ್ನೆಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:296 ಗಂಟೆಗಳ ಕಾಲ ಅವಶೇಷಗಳಡಿಯಲ್ಲಿದ್ದ ದಂಪತಿ-ಮಗ; ಭೂಕಂಪದ 12 ದಿನಗಳ ಬಳಿಕ ಜೀವಂತ ರಕ್ಷಣೆ
ಭೂಮಿ ಮೇಲ್ಮೈ ಹಲವಾರು ಪದರಗಳಿಂದಾಗಿದ್ದು, ಅದು ಚಲನಶೀಲವಾಗಿರುತ್ತದೆ. ಭಾರತದಲ್ಲಿನ ಪದರಗಳು ವರ್ಷಕ್ಕೆ ಐದು ಸೆಂಟಿಮೀಟರ್​ನಷ್ಟು ಜರುಗುತ್ತಿರುವ ಪರಿಣಾಮವಾಗಿ ಹಿಮಾಲಯ ಪ್ರದೇಶದಲ್ಲಿ ತೀವ್ರ ಒತ್ತಡ ಸೃಷ್ಟಿಯಾದ್ದರಿಂದ ಭಾರಿ ಭೂಕಂಪ ಉಂಟಾಗುವ ಸಾಧ್ಯತೆ ಇದೆ. ಹಿಮಾಚಲಪ್ರದೇಶ, ಉತ್ತರಾಖಂಡ ಹಾಗೂ ನೇಪಾಳದ ಪಶ್ಚಿಮ ಭಾಗದಲ್ಲಿ ಯಾವುದೇ ಸಂದರ್ಭದಲ್ಲಿ ಭೂಕಂಪ ಸಂಭವಿಸಬಹುದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ತಮ್ಮದೇ ಮೂತ್ರ ಕುಡಿದು ಜೀವ ಉಳಿಸಿಕೊಂಡ ಸಹೋದರರು; ಭೂಕಂಪದ ಅವಶೇಷಗಳಡಿ 1 ವಾರ ಜೀವನ್ಮರಣ ಹೋರಾಟ
ಬರ್ತ್​ಡೇ ಪಾರ್ಟಿಯಲ್ಲಿ ಚಿತ್ರನಟನ ಮೇಲೆ ಹಲ್ಲೆ; ಆಡಿ ಕಾರಿನ ಗಾಜುಗಳು ಧ್ವಂಸ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
