ನವದೆಹಲಿ:ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಕರೆಯಲ್ಪಡುತ್ತಿರುವ ಪಂಚರಾಜ್ಯ ಚುನಾವಣೆಯ ಫಲಿತಾಂಶ ಡಿಸೆಂಬರ್​ 03ರಂದು ಹೊರಬೀಳಲಿದ್ದು, ಮಿಜೋರಾಂನಲ್ಲಿ ಮಾತ್ರ ಫಲಿತಾಂಶವನ್ನು ಸೋಮವಾರ ಪ್ರಕಟಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಚುನಾವಣಾ ಆಯೋಗ ಮಿಜೋರಾಂನಲ್ಲಿ ಮತ ಎಣಿಕೆಯ ದಿನದ ಬದಲಾವಣೆಗಾಗಿ ವಿವಿಧ ವಲಯಗಳಿಂದ ಮನವಿ ಸಲ್ಲಿಕೆಯಾಗಿತ್ತು. ಅದನ್ನು ಪರಿಗಣಿಸಿ ಆಯೋಗ ಮತ ಎಣಿಕೆ ದಿನಾಂಕ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ.
Election Commission of India revises the date of counting for the General Election to the Legislative Assembly of Mizoram from 3rd December, 2023 (Sunday) to 4th December, 2023 (Monday).EC says, "The Commission has received several representations from various quarters…pic.twitter.com/DIrR1rXJeQ
ಇದನ್ನೂ ಓದಿ:ನಾನು ಇರ್ಫಾನ್​ ಪಠಾಣ್​ ಪ್ರೀತಿಸುತ್ತಿದ್ದೆವು; ಗೌತಮ್​ ಗಂಭೀರ್​ ಮಿಸ್ಟ್​ ಕಾಲ್​ ಕೊಡುತ್ತಿದ್ದರು ಎಂದ ಬಾಲಿವುಡ್​ ನಟಿ
ಕ್ರಿಶ್ಚಿಯನ್‌ ಸಮುದಾಯದವರೇ ಹೆಚ್ಚಿರುವ ಮಿಜೋರಾಂನ ಜನರಿಗೆ ಡಿಸೆಂಬರ್ 3 ರ ಭಾನುವಾರ ವಿಶೇಷ ದಿನವಾಗಿದೆ. ಈ ಪ್ರಾತಿನಿಧ್ಯ ಪರಿಗಣಿಸಿದ ಆಯೋಗವು ಮತ ಎಣಿಕೆ ದಿನಾಂಕವನ್ನು ಡಿ.4 ಕ್ಕೆ ಬದಲಾಯಿಸಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.
40 ಸದಸ್ಯಬಲದ ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಮತದಾನ ನಡೆದಿದ್ದು, ಡಿಸೆಂಬರ್ 4 ರಂದು ಮತ ಎಣಿಕೆ ನಡೆಯಲಿದೆ. ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ 5 ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಡಿಸೆಂಬರ್ 3 ರಂದು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗವು ಈ ಹಿಂದೆ ಪ್ರಕಟಿಸಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
