ಹೈದರಾಬಾದ್:ಸಾರ್ವತ್ರಿಕ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸದಂತೆ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಕೇಂದ್ರ ಚುನಾವಣಾ ಆಯೋಗ ನಿಷೇಧ ಹೇರಿದೆ.
ಇದನ್ನೂ ಓದಿ:‘ಮೋದಿ ರಾಜಕೀಯ ಅಂತ್ಯ ಕಾಲವಿದು’: ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಕಾಂಗ್ರೆಸ್‌ ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಕ್ಕೆ ಗುರಿಯಾಗಿರುವ ಮಾಜಿ ಸಿಎಂ ಕೆಸಿಆರ್​ಗೆ ನಿರ್ಬಂಧ ವಿಧಿಸಲಾಗಿದೆ. ಮುಂದಿನ 48 ಗಂಟೆ ಕಾಲ ಪ್ರಚಾರದಲ್ಲಿ ಭಾಗಿಯಾಗದಂತೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. ಇಂದು ರಾತ್ರಿ 8 ಗಂಟೆಯಿಂದ 48 ಗಂಟೆ ಕಾಲ ಅವರು ಪ್ರಚಾರ ನಡೆಸುವಂತಿಲ್ಲ.
ಏಪ್ರಿಲ್​ 5 ರಂದು ತೆಲಂಗಾಣದ ಸಿರಿಸಿಲ್ಲದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೆಸಿಆರ್. ಕೀಳ ಪದಗಳನ್ನು ಬಳಸಿ ಕಾಂಗ್ರೆಸ್​ ನಾಯಕರ ವಿರುದ್ಧ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ತೆಲಂಗಾಣ ನಾಯಕ ಜಿ.ನಿರಂಜನ್​ ದೂರು ನೀಡಿದ್ದರು. ಅದರ ವಿಚಾರಣೆ ನಡೆಸಿದ ಆಯೋಗವು ಕೆಸಿಆರ್ ಅವರಿಗೆ ಭಾನುವಾರ ರಾತ್ರಿ 8ರಿಂದ ಅನ್ವಯಿಸುವಂತೆ 48 ಗಂಟೆಗಳ ಪ್ರಚಾರ ನಿರ್ಬಂಧಿಸಿದೆ.
ತಮ್ಮ ವಿರುದ್ಧದ ದೂರಿಗೆ ಪ್ರತಿಕ್ರಿಯಿಸಿದ ಕೆಸಿಆರ್, ತಮ್ಮ ಟೀಕೆಗಳು ರಾಜ್ಯದಲ್ಲಿ ಕಾಂಗ್ರೆಸ್‌ನ ನೀತಿಗಳು ಮತ್ತು ಕಾರ್ಯಕ್ರಮಗಳಿಗೆ ಸೀಮಿತವಾಗಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಯಾವುದೇ ವೈಯಕ್ತಿಕ ಟೀಕೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಕೀಳು ಪದಗಳನ್ನು ಬಳಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನ ಮಾಡಿರುವ ಕೆಸಿಆರ್ ಅವರಿಗೆ 48 ಗಂಟೆಗಳ ಕಾಲ ಪ್ರಚಾರ ನಿರ್ಬಂಧ ಜೊತೆಗೆ ಅವರ ಕುರಿತು ಮಾತನಾಡಿರುವ ದೂರಿನ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೆಸಿಆರ್​ಗೆ ನೋಟಿಸ್ ನೀಡಲಾಗಿದೆ.
ಪ್ರಜ್ವಲ್ ಚಾಲಕ ಕಾರ್ತಿಕ್​ನನ್ನು ಮಲೇಷ್ಯಾಗೆ ಕಳಿಸಿದ್ದು ಯಾರು?: ಎಚ್​ಡಿಕೆ ಪ್ರಶ್ನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + eighteen =
Remember me
