ನವದೆಹಲಿ:ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹರಿಯಾಣ ಕಾಂಗ್ರೆಸ್​ ಶಾಸಕ ಸುರೇಂದ್ರ ಪನ್ವಾರ್​ ಅವರನ್ನು ಶನಿವಾರ ಬಂಧಿಸಿದೆ. ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ವಿಧಿಸಿರುವ ನಿಷೇಧದ ನಡುವೆಯೂ ಯಮುನಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಂಗ್ರೆಸ್​ ಶಾಸಕ ಹಾಗೂ ಆತನ ಸಹಚರರು ಅಕ್ರಮವಾಗಿ ಗಣಿಕಾರಿಕೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂಡಿಯನ್‌ ನ್ಯಾಷನಲ್‌ ಲೋಕದಳದ (INLD) ಮಾಜಿ ಶಾಸಕ ದಿಲ್‌ಬಾಗ್ ಸಿಂಗ್ ಮತ್ತು ಆತನ ಸಹಚರನನ್ನು ವಶಕ್ಕೆ ಪಡೆದಿದೆ.
Surender Panwar, MLA Sonepat has been arrested by ED in an illegal mining case.
ಇದನ್ನೂ ಓದಿ:ಸಿನಿಮಾ ಪ್ರಮೋಷನ್​ ವೇಳೆ ಮದುವೆ ಕುರಿತು ಪ್ರಶ್ನೆ; ನಟಿ ಶ್ರದ್ಧಾ ಖಡಕ್ ರಿಪ್ಲೈಗೆ ಸುಸ್ತಾದ ಪಾಪರಾಜಿಗಳು
ಗಣಿಗಾರಿಕೆ ಪ್ರದೇಶಗಳಲ್ಲಿ ತೆರಿಗೆ ವಂಚನೆಯನ್ನು ತಡೆಗಟ್ಟಲು ಹರಿಯಾಣ ಸರ್ಕಾರವು 2020ರಲ್ಲಿ ಪರಿಚಯಿಸಿದ ಆನ್‌ಲೈನ್ ಪೋರ್ಟಲ್ ‘ಇ-ರಾವಣ’ ಯೋಜನೆಯಡಿ ದಾಖಲಾಗಿರುವ ವಂಚನೆ ಪ್ರಕರಣಗಳ ಕುರಿತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಈ ವರ್ಷ ಜನವರಿಯಲ್ಲಿ ಕಾಂಗ್ರೆಸ್​ ಶಾಸಕನ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿತ್ತು.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸುವ ಸಲುವಾಗಿ ಕಾಂಗ್ರೆಸ್​ ಶಾಸಕನನ್ನು ಬಂಧಿಸಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − 5 =
Remember me
