ನವದೆಹಲಿ:ಮಹತ್ವದ ಬೆಳವಣಿಗೆ ಒಂದರಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ಹಾಗೂ ಅಕ್ರಮ ಹಣಕಾಸು ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹುರಿಯತ್​ ನಾಯಕ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದೆ.
ಬಂಧಿತರನ್ನು ಜಮ್ಮು-ಕಾಶ್ಮೀರದ ಶ್ರೀನಗರ ಮೂಲದ ಮೊಹಮ್ಮದ್​ ಅಕ್ಬರ್​ ಭಟ್​, ಫಾತಿಮಾ ಷಾ, ಅನಂತ್​ ನಾಗ್​ ಜಿಲ್ಲೆಯ ಸಬ್ಜರ್ ಅಹ್ಮದ್ ಶೇಖ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಫೆಬ್ರವರಿ 20ರವರೆಗೆ ಕಸ್ಟಡಿಯಲ್ಲಿರಿಸಿಕೊಳ್ಳಲು ನ್ಯಾಯಾಲಯ ಅನುಮತಿಸಿದೆ.
ED has arrested three persons namely Mohammad Akabar Bhat, Ms. Fatima Shah, resident of Srinagar and Sabzzar Ahmad Shaikh, resident of Anantnag (J&K), on 13/02/2024 under the provisions of PMLA, 2002 in connection with money laundering case wherein accused persons involved in…
ಇದನ್ನೂ ಓದಿ:ಊರುಗೋಲಿನ ಸಹಾಯದಲ್ಲಿ ಹೃತಿಕ್ ರೋಷನ್​; ಅಷ್ಟಕ್ಕೂ ಆಗಿದ್ದಾದರು ಏನು?
ಬಂಧಿತ ಆರೋಪಿಗಳು ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ಪೂರೈಸುತ್ತಿದ್ದರು ಮತ್ತು ಜಮ್ಮು–ಕಾಶ್ಮೀರ ವಿದ್ಯಾರ್ಥಿಗಳಿಗೆ ಪಾಕಿಸ್ತಾನದ ಕಾಲೇಜುಗಳಲ್ಲಿ ವೈದ್ಯಕೀಯ ಸೀಟುಗಳನ್ನು ಕೊಡಿಸುತ್ತಿದ್ದರು ಎಂದು ತಿಳಿದು ಬಂದಿದೆ. ತಮ್ಮ ವೈಯಕ್ತಿಕ ಖಾತೆಗಳಿಗೆ ಮತ್ತು ಅಲ್‌–ಜಬರ್‌ ಟ್ರಸ್ಟ್‌ನ ಖಾತೆಗೆ ಹಣ ಜಮಾ ಮಾಡಿಸಿಕೊಳ್ಳುತ್ತಿದ್ದ ಬಂಧಿತ ಆರೋಪಿಗಳು, ಆ ಹಣವನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸುತ್ತಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಈ ಹಿನ್ನಲೆಯಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ನಿಬಂಧನೆಗಳ ಅಡಿಯಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten + 15 =
Remember me
