ಆನ್‍ಲೈನ್ ಬೆಟ್ಟಿಂಗ್ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದ ನಕಲಿ ಕಂಪನಿಗಳಿಗೆ ಬಿಸಿ ಮುಟ್ಟಿಸಿರುವ ಜಾರಿ ನಿರ್ದೇಶನಾಲಯ(ED) 5.87 ಕೋಟಿ ರೂ. ಮೊತ್ತದ ಆಸ್ತಿ ಮುಟ್ಟುಗೋಲು ಹಾಕಿದೆ. ಈ ಮೂಲಕ ಜೂಜಾಟದ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಇ.ಡಿ ನಿರ್ಣಾಯಕ ಹೆಜ್ಜೆ ಇಟ್ಟಿದೆ.
ಅಕ್ರಮ ಆನ್‌ಲೈನ್ ಜೂಜು, ಬೆಟ್ಟಿಂಗ್ ಮತ್ತು ಅನುಮಾನಾಸ್ಪದ ಚಟುವಟಿಕೆಗಳಲ್ಲಿ ಹಲವಾರು ಕಂಪನಿಗಳು ತೊಡಗಿಸಿಕೊಂಡಿವೆ ಎಂದು ಆರೋಪಿಸಿ ಸರಕು ಮತ್ತು ಸೇವಾ ತೆರಿಗೆ ಗುಪ್ತಚರ ನಿರ್ದೇಶನಾಲಯ (DGGI) ಕಚೇರಿಯಿಂದ ದೂರು ದಾಖಲಾಗಿತ್ತು.
ಈ ದೂರಿನನ್ವಯ ಆನ್‌ಲೈನ್‌ ಬೆಟ್ಟಿಂಗ್‌ ಹೆಸರಲ್ಲಿ ಜನರನ್ನು ವಂಚಿಸಿದ್ದ ನಕಲಿ ಕಂಪನಿಗಳು ಮತ್ತು ಆ ಕಂಪನಿಗಳಿಗೆ ಸೇರಿದ ವ್ಯಕ್ತಿಗಳ ಬ್ಯಾಂಕ್‌ ಖಾತೆಯಲ್ಲಿನ 5.87 ಕೋಟಿ ರೂ. ಚರಾಸ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಗುಪ್ತಚರ ನಿರ್ದೇಶನಾಲಯದ ಮಹಾ ನಿರ್ದೇಶಕರ ಕಚೇರಿಯಿಂದ ಬಂದ ದೂರಿನನ್ವಯ ಬೆಂಗಳೂರಿನ ವಿವೇಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯಡಿ (PMLA) ವಂಚಕ ಕಂಪೆನಿಗಳ ವಿರುದ್ಧ ತನಿಖೆ ನಡೆಸಲಾಗಿತ್ತು ಎಂದು ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 1 =
Remember me
