ತಿರುವನಂತಪುರ:ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ)ದ ಪ್ರಮುಖ ಪದಾಧಿಕಾರಿಗಳ ಮನೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, ಹಣಕಾಸಿನ ಅಕ್ರಮಕ್ಕೆ ಸಂಬಂಧಿಸಿದ ದಾಖಲೆಗಳಿಗಾಗಿ ಶೋಧ ನಡೆಸಿದ್ದಾರೆ. ಪಿಎಫ್​ಐ ಮುಖ್ಯಸ್ಥ ಒಎಂಎ ಸಲಾಮ್, ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್​ ಎಲಮರಮ್​ ಅವರಿಗೆ ಸೇರಿದ ಹಲವು ಕಡೆಗಳಲ್ಲಿ ಇಡಿ ತಂಡ ಶೋಧ ಕಾರ್ಯ ಮುಂದುವರಿಸಿದೆ.
ಸದ್ಯದ ಮಾಹಿತಿ ಪ್ರಕಾರ, ಇಡಿ ಶೋಧ ಕಾರ್ಯ ಕೇರಳದ ಮಲಪ್ಪುರ, ತಿರುವನಂತಪುರ​ಗಳಲ್ಲಿ ನಡೆದಿದೆ. ದೇಶದಲ್ಲಿ ಉಗ್ರ ಚಟುವಟಿಕೆಗೆ ಹಣಕಾಸು ಮತ್ತು ಇತರೆ ನೆರವನ್ನು ಇದೇ ಸಂಘಟನೆ ಮಾಡುತ್ತಿದೆ ಎಂಬ ಆರೋಪ ಇತ್ತೀಚಿನ ವರ್ಷಗಳಲ್ಲಿ ವ್ಯಾಪಕವಾಗಿ ಕೇಳಿಬಂದಿತ್ತು. ಪ್ರಚೋದನಾಕಾರಿ ನಡೆಗಳಿಗೆ ಈ ಸಂಘಟನೆ ಹೆಸರುವಾಸಿಯಾಗಿದ್ದು, ಬೆಂಗಳೂರು ಗಲಭೆ ಸಂದರ್ಭದಲ್ಲೂ ಇದರ ಹೆಸರು ಕೇಳಿತ್ತು.
ಇದನ್ನೂ ಓದಿ:ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ತಲೆಮರೆಸಿಕೊಂಡಿದ್ದ ಮಾಜಿ ಕಾರ್ಪೊರೇಟರ್ ಸಿಸಿಬಿ ಬಲೆಗೆ
ಜಾರಿ ನಿರ್ದೇಶನಾಲಯದ ದಾಳಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಸಲಾಮ್​, ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಿಂದ ದೇಶದ ಗಮನವನ್ನು ಬೇರೆಡೆ ಸೆಳೆಯುವುದಕ್ಕಾಗಿ ಈ ದಾಳಿಯನ್ನು ಆಯೋಜಿಸಲಾಗಿದೆ. ಇದು ಬಿಜೆಪಿ ಸರ್ಕಾರದ ವೈಫಲ್ಯವಾಗಿದೆ. ನ್ಯಾಯಕ್ಕಾಗಿ ಧ್ವನಿ ಏರಿಸುವ ನಮ್ಮ ಪ್ರವೃತ್ತಿಯನ್ನು ಈ ದಾಳಿಗಳು ತಡೆಯಲಾರವು. ಸರ್ಕಾರ ತನಿಖಾ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದಾರೆ. (ಏಜೆನ್ಸೀಸ್)
ವಿಕಿಪೀಡಿಯಾವನ್ನು ಬ್ಲಾಕ್ ಮಾಡುತ್ತಾ ಸರ್ಕಾರ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + seven =
Remember me
