ನವದೆಹಲಿ:ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ಜಾರಿ ನಿರ್ದೇಶನಾಲಯ ಎಂಟನೇ ಬಾರಿಗೆ ನೊಟಿಸ್​ ಜಾರಿ ಮಾಡಿದೆ.
ಮಾರ್ಚ್​ 16ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ಮಾಡಲಾಗಿರುವ ಸಮನ್ಸ್​ನಲ್ಲಿ ಸೂಚಿಸಲಾಗಿದೆ. ಅಬಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್​ಗೆ ಜಾರಿ ಮಾಡಲಾಗಿರುವ ಆರನೇ ನೋಟಿಸ್​ ಇದಾಗಿದೆ.
ಇದನ್ನೂ ಓದಿ:ರಾಜ್ಯಸಭಾ ಚುನಾವಣೆ; ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿರುವ ಜೆಡಿಎಸ್​ಗೆ ಆತ್ಮಸಾಕ್ಷಿ ಇದೆಯೇ: ಸಿಎಂ ಸಿದ್ದರಾಮಯ್ಯ
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಏಳು ಬಾರಿ ನೋಟಿಸ್​ ಜಾರಿ ಮಾಡಿದ್ದು, ವಿಚಾರಣೆಗೆ ಕೇಜ್ರಿವಾಲ್​ ಹಾಜರಾಗುತ್ತಿಲ್ಲ ಎಂದು ಆರೋಪಿಸಿ ED ನ್ಯಾಯಾಲಯಕ್ಕೆ ದೂರು ಸಲ್ಲಿಸಿತ್ತು. ನ್ಯಾಯಾಲಯ ಆದೇಶಿಸಿದರೆ ಮಾತ್ರ ವಿಚಾರಣೆಗೆ ಹಾಜರಾಗುವುದಾಗಿ ಕೇಜ್ರಿವಾಲ್​ ತಿಳಿಸಿದ್ದರು.
ಈ ಹಿಂದೆ ನವೆಂಬರ್ 02, ಡಿಸೆಂಬರ್ 21, ಜನವರಿ 03, 18 ಹಾಗೂ ಫೆಬ್ರವರಿ 02, 16ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್​ ಜಾರಿ ಮಾಡಿತ್ತು. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಕೇಜ್ರಿವಾಲ್​ ಇದೊಂದು ಸುಳ್ಳು ಪ್ರಕರಣವಾಗಿದ್ದು, ತಾವು ವಿಚಾರಣೆಗೆ ಹಾಜರಾಗುವುದಿಲ್ಲ ಎಂದಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − two =
Remember me
