ನವದೆಹಲಿ:ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ನವೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.
ಅಬಕಾರಿ ನೀತಿ ಜಾರಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಬಹುಕೋಟಿ ಹಣ ವರ್ಗಾವಣೆಗೆ ಸಂಬಂಧಿಸಿದಂತೆ 7 ತಿಂಗಳ ಹಿಂದೆ ಅರವಿಂದ್​ ಕೇಜ್ರಿವಾಲ್​ರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು.
ಇದನ್ನೂ ಓದಿ:ತೆಲಂಗಾಣ ಚುನಾವಣೆ; ಕಾಂಗ್ರೆಸ್​ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖಾಧಿಕಾರಿಗಳ ಮುಂದೆ ತಮ್ಮ ಹೇಳಿಕೆ ದಾಖಲಿಸಲು ಕೇಜ್ರಿವಾಲ್​ಗೆ ಸಮನ್ಸ್​ ನೀಡಲಾಗಿದೆ. ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇದೇ ಮೊದಲ ಬಾರಿಗೆ ನೋಟಿಸ್​ ಜಾರಿ ಮಾಡಿದೆ.
ಇತ್ತ ಕೇಜ್ರಿವಾಲ್​ಗೆ ಸಮನ್ಸ್​ ನೀಡಿರುವ ತನಿಖಾ ಸಂಸ್ಥೆಯ ಕ್ರಮವನ್ನು ಖಂಡಿಸಿರುವ ಸಚಿವ ಸೌರಭ್​ ಭಾರಧ್ವಾಜ್, ಇದು ಕೇಂದ್ರ ಎಎಪಿ ಸರ್ಕಾರದ ವಿರುದ್ಧ ಹೆಣೆದಿರುವ ಷಡ್ಯಂತ್ರ. ವಿಚಾರಣೆಯ ಹೆಸರಿನಲ್ಲಿ ಮುಖ್ಯಮಂತ್ರಿಗಳನ್ನು ಬಂಧಿಸಿ ಸರ್ಕಾರವನ್ನು ಪತನ ಮಾಡಬೇಕೆಂದು ಬಿಜೆಪಿ ಷಡ್ಯಂತ್ರ ಹೆಣೆದಿದೆ. ನಾವು ಯಾರು ಇದಕ್ಕೆ ಹೆದರುವವರಲ್ಲ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + five =
Remember me
