ನವದೆಹಲಿ:ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆ ಮಾಡಿದ ಆರೋಪದ ಮೇಲೆ ಪ್ರತಿಷ್ಠಿತ ಆನ್​ಲೈನ್​ ಶಿಕ್ಷಣ ಸಂಸ್ಥೆ ಬೈಜುಸ್​ಗೆ ಜಾರಿ ನಿರ್ದೇಶನಾಲಯ (ED) ಶೋಕಾಸ್ ನೋಟಿಸ್​ ಜಾರಿ ಮಾಡಿದೆ.
ವಿದೇಶಿ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ 9,000 ಕೋಟಿ ಮೊತ್ತದ ದಂಡವನ್ನು ಕಟ್ಟುವಂತೆ ಬೈಜುಸ್​ ಮುಖ್ಯಸ್ಥ ರವೀಂದ್ರನ್​ ಬೈಜು, ಥಿಂಕ್​ ಅಂಡ್​ ಲರ್ನ್​ ಪ್ರೈವೇಟ್​ ಲಿಮಿಟೆಡ್​ಗೆ ಜಾರಿ ನಿರ್ದೇಶನಾಲಯ ನೋಟಿಸ್​ ಜಾರಿ ಮಾಡಿದೆ.
pic.twitter.com/6fWEQUd7X1
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿರುವ ಬೈಜುಸ್​ ಸಂಸ್ಥೆ, ಜಾರಿ ನಿರ್ದೇಶನಾಲಯದಿಂದ ಸಂಸ್ಥೆಗೆ ಯಾವುದೇ ರೀತಿಯ ನೋಟಿಸ್​ ಜಾರಿ ಮಾಡಲಾಗಿಲ್ಲ ಎಂದು ತನ್ನ ಮೇಲೆ ಮಾಡಲಾಗಿರುವ ಆರೋಪಗಳನ್ನು ನಿರಾಕರಿಸಿದೆ.
ಸುದ್ದಿ ಮೂಲಗಳ ಪ್ರಕಾರ ಬೈಜುಸ್​ ಮುಖ್ಯಸ್ಥ ರವೀಂದ್ರನ್ 2011 ರಿಂದ 23ರ ವರೆಗೆ ಸುಮಾರು ₹ 28,000 ಕೋಟಿಗಳಷ್ಟು ವಿದೇಶಿ ನೇರ ಹೂಡಿಕೆಯನ್ನು (FDI) ಸ್ವೀಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಅವಧಿಯಲ್ಲಿ ಸುಮಾರು 9,754 ಕೋಟಿ ರೂಪಾಯಿಗಳಷ್ಟು ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − thirteen =
Remember me
