ಮುಂಬೈ:ಮಹಾನಗರದ ಜೋಗೇಶ್ವರಿಯಲ್ಲಿ ಐಷಾರಾಮಿ ಹೋಟೆಲ್ ನಿರ್ಮಾಣಕ್ಕೆ ಅಕ್ರಮ ಹಣ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ (ಉದ್ಧವ್ ಬಣ) ಮುಖಂಡ ಮತ್ತು ಶಾಸಕ ರವೀಂದ್ರ ವೈಕರ್ ಮತ್ತು ಅವರ ಪಾಲುದಾರರಿಗೆ ಸಂಬಂಧಿಸಿದ ಏಳು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ ದಾಳಿ ನಡೆಸಿದೆ.
ಇದನ್ನೂ ಓದಿ:ಮ್ಯಾನ್ಮಾರ್​ನಲ್ಲಿ ಉಗ್ರರ ಶಿಬಿರದ ಮೇಲೆ ಭಾರತ ಬಾಂಬ್‌ ದಾಳಿ!
ಮುಂಬೈ ಮಹಾನಗರದಲ್ಲಿ ಭೂ ಕಬಳಕೆಯ ಷರತ್ತುಗಳನ್ನು ದುರ್ಬಳಕೆ ಮಾಡಿಕೊಂಡು ಜೋಗೇಶ್ವರಿಯಲ್ಲಿ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದಲ್ಲಿ ಪಂಚತಾರಾ ಹೋಟೆಲ್ ನಿರ್ಮಿಸಲು ಅನುಮತಿ ಪಡೆದು ಬಿಎಂಸಿಗೆ 500 ಕೋಟಿ ರೂಪಾಯಿ ವಂಚಿಸಿದ ಆರೋಪ ರವೀಂದ್ರ ಶಾಸಕ ವೈಕರ್ ಮೇಲಿದೆ.
ವೈಕರ್ ವಿರುದ್ಧ ಇಡಿ ನವೆಂಬರ್‌ನಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.ವೈಕರ್ ಮುಂಬೈನ ಜೋಗೇಶ್ವರಿ ಪೂರ್ವ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಅವರ ಆಪ್ತರು.
ಹೆತ್ತ ಮಗುವನ್ನೇ ಹತ್ಯೆಗೈದ ಸುಚನಾ ಸೇಠ್‌ ಯಾರು? ಕೊಲೆಗೆ ಕಾರಣವೇನು? ವಿವರ ಇಲ್ಲಿದೆ ಓದಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 9 =
Remember me
