ಮುಂಬೈ:ಎಬಿಜಿ ಶಿಪ್‌ಯಾರ್ಡ್ ಲಿಮಿಟೆಡ್ ಮತ್ತು ಅದರ ಅಂಗಸಂಸ್ಥೆಗಳಿಗೆ ಸಂಬಂಧಿಸಿದ ಕಂಪನಿಗಳಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ED) ಮುಂಬೈ, ದೆಹಲಿ ಮತ್ತು ಪುಣೆ ಸೇರಿದಂತೆ ಏಳು ಕಡೆ ದಾಳಿ ನಡೆಸಿದೆ.
ಸುಮಾರು 22,842 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎನ್ನಲಾಗಿದ್ದು, ಸಿಬಿಐ ದಾಖಲಿಸಿರುವ FIR ಆಧರಿಸಿ ಜಾರಿ ನಿರ್ದೇಶನಾಲಯ PMLA ಕಾಯ್ದೆ ಅಡಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ.
ಇದನ್ನೂ ಓದಿ:VIDEO| ಪ್ರಿಯಕರನಿಗಾಗಿ ಪಾಕ್​ಗೆ ತೆರಳಿದ ಅಂಜು ಭಾರತಕ್ಕೆ ವಾಪಸ್!
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ಎಬಿಜಿ ಶಿಪ್‌ಯಾರ್ಡ್ ಮತ್ತು ಅದರ ಸಂಬಂಧಿತ ಕಂಪನಿಗಳಿಗೆ ಸಂಬಂಧಿಸಿದ ವ್ಯಕ್ತಿಗಳು ಮತ್ತು ಕುಟುಂಬದ ಸದಸ್ಯರ ನಿವಾಸಗಳಲ್ಲಿ ನಡೆಸಿದ ಶೋಧನೆಯಲ್ಲಿ ಲೆಕ್ಕಕ್ಕೆ ಸಿಗದ ಭಾರತೀಯ ಮತ್ತು ವಿದೇಶಿ ಕರೆನ್ಸಿ, ಚಿನ್ನಾಭರಣ ಮತ್ತು ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ದಾಳಿ ವೇಳೆ ಸುಮಾರು 5 ಕೋಟಿ ಹಣ, 46.85 ಲಕ್ಷ ರೂಪಾಯಿ ವಿದೇಶಿ ಹಣ, 86.52 ಲಕ್ಷ ರೂಪಾಯಿ ಮೌಲ್ಯದ ಆಭರಣಗಳ ಜತೆಗೆ ಕೆಲವು ದಾಖಲೆಗಳು ಹಾಗೂ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಐಸಿಐಸಿಐ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟಕ್ಕೆ 22,842 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ ಆರೋಪದ ಮೇಲೆ ಸಿಬಿಐ ದಾಖಲಿಸಿದ FIR ಆಧರಿಸಿ ಈ ದಾಳಿ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 19 =
Remember me
