ನವದೆಹಲಿ:ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ ಜಾರಿ ನಿರ್ದೇಶನಾಲಯ (ED) ನೋಟಿಸ್ ಜಾರಿ ಮಾಡಿದೆ
ಅಬಕಾರಿ ನೀತಿ ಜಾರಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಬಹುಕೋಟಿ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಏಪ್ರಿಲ್ ತಿಂಗಳಲ್ಲಿ ಅರವಿಂದ್​ ಕೇಜ್ರಿವಾಲ್​ರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. 9.5 ಘಂಟೆಗಳ ಕಾಲ ವಿಚಾರಣೆ ಎದುರಿಸಿದ್ದ ಕೇಜ್ರಿವಾಲ್​ 56 ಪ್ರಶ್ನೆಗಳಿಗೆ ಉತ್ತರಿಸಿದ್ದಾಗಿ ತಿಳಿಸಿದ್ದರು.
ನವೆಂಬರ್​ 02ರಂದು ವಿಚಾರಣೆಗೆ ಹಾಜರಾಗುವಂತೆ ED ನೋಟಿಸ್​ ಜಾರಿ ಮಾಡಿತ್ತು. ಆದರೆ, ಇದು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಅರವಿಂದ್​ ಕೇಜ್ರಿವಾಲ್​ ವಿಚಾರಣೆಗೆ ಹಾಜರಾಗಿರಲಿಲ್ಲ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖಾಧಿಕಾರಿಗಳ ಮುಂದೆ ತಮ್ಮ ಹೇಳಿಕೆ ದಾಖಲಿಸಲು ಕೇಜ್ರಿವಾಲ್​ಗೆ ಸಮನ್ಸ್​ ನೀಡಲಾಗಿದೆ. ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಎರಡನೇ ಬಾರಿಗೆ ನೋಟಿಸ್​ ಜಾರಿ ಮಾಡಿದೆ.
ED summons Delhi CM and AAP national convener Arvind Kejriwal once again for questioning in connection with Delhi Excise Policy matter. The agency has asked him to appear before them on 21st December.(File photo)pic.twitter.com/wOtaZ41c6d
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − five =
Remember me
