ನವದೆಹಲಿ:ಉದ್ಯೋಗಕ್ಕಾಗಿ ಭೂಮಿ ಯೋಜನೆ ಹಗರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಜೆಡಿ ವರಿಷ್ಠ ಲಾಲು ಪ್ರಸಾದ್​ ಯಾದವ್, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್​ಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್​ ಜಾರಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖಾಧಿಕಾರಿಗಳ ಮುಂದೆ ತಮ್ಮ ಹೇಳಿಕೆ ದಾಖಲಿಸಲು ಡಿಸೆಂಬರ್​ 22ರಂದು ತೇಜಸ್ವಿ ಯಾದವ್ ಹಾಗೂ ಡಿಸೆಂಬರ್​ 27ರಂದು ಲಾಲು ಪ್ರಸಾದ್​ ಯಾದವ್ ವಿಚಾರಣೆಗೆ ಹಾಜರಾಗುವಂತೆ​ ನೀಡಲಾಗಿರುವ ಸಮನ್ಸ್​ನಲ್ಲಿ ಸೂಚಿಸಲಾಗಿದೆ.
ಲಾಲು ಪ್ರಸಾದ್​ ಯಾದವ್​ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದ ವೇಳೆ ಹಗರಣ ನಡೆದಿದ್ದು, 2004 ರಿಂದ 2009ರ ಅವಧಿಯಲ್ಲಿ ರೈಲ್ವೆ ಇಲಾಖೆಯ ಡಿ ಗ್ರೂಪ್​ ಹುದ್ದೆಗಳಿಗೆ ಹಲವಾರು ಜನರನ್ನು ನೇಮಿಸಲಾಯಿತು. ನೇಮಕಗೊಂಡವರು ಬದಲಿಯಾಗಿ ತಮ್ಮ ಜಮೀನನ್ನು ಆಗಿನ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್​ ಯಾದವ್​ ಅವರಿಗೆ ಸಂಬಂಧಿಸಿದ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್​ಗೆ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 9 =
Remember me
