ಮುಂಬೈ:ಡಾ.ಬಾಬಾಸಾಹೇಬ್ ಅಂಬೇಡ್ಕರ್, ಛತ್ರಪತಿ ಶಾಹು ಮಹಾರಾಜ್, ಜ್ಯೋತಿಬಾ ಫುಲೆ ಅವರ ಜನ್ಮ ಜಯಂತಿ ಕಾರ್ಯಕ್ರಮವನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳ ಗುಂಪೊಂದು ಮೊಟ್ಟೆ ಹಾಗೂ ಕಿತ್ತಳೆ ಸಿಪ್ಪೆ ಎಸೆದು ವಿಕೃತಿ ಮೆರೆದಿರುವ ಘಟನೆ ಮಹಾರಾಷ್ಟ್ರದ ನವಿಮುಂಬೈನ ಪನ್ವೇಲ್ ಪ್ರದೇಶದ ಕೊಂಗಾವ್‌ನಲ್ಲಿ ನಡೆದಿದೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅರೋಪಿಗಳಿಗೆ ಬಲೆ ಬೀಸಿದ್ದಾರೆ. ಇತ್ತ ಘಟನೆ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ:ಎಸ್​ಆರ್​ಎಚ್​ ವಿರುದ್ಧ 25ರನ್​ಗಳ ಸೋಲು; ಆರ್​ಸಿಬಿ ನಾಯಕ ಫಾಫ್​ ನೀಡಿದ ಕಾರಣ ಹೀಗಿದೆ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಪನ್ವೇಲ್ ಪ್ರದೇಶದ ಕೊಂಗಾವ್‌ನಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್, ಛತ್ರಪತಿ ಶಾಹು ಮಹಾರಾಜ್, ಜ್ಯೋತಿಬಾ ಫುಲೆ ಅವರ ಜನ್ಮ ಜಯಂತಿಯನ್ನು ಆಚರಿಸಲಾಗುತ್ತಿತ್ತು. ಈ ವೇಳೆ ಕೆಲವು ದುಷ್ಕರ್ಮಿಗಳು ಮೊಟ್ಟೆ, ಕಿತ್ತಳೆ ಸಿಪ್ಪೆಗಳನ್ನು ಎಸೆದು ಪರಾರಿಯಾಗಿದ್ದಾರೆ.
ಯಾವ ಕಾರಣಕ್ಕಾಗಿ ಈ ರೀತಿ ಮಾಡಲಾಯಿತು ಎಂದು ತಿಳಿದು ಬಂದಿಲ್ಲ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 295 (ಎ), ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 − 4 =
Remember me
