ನವದೆಹಲಿ:ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಇದೀಗ ಸುಪ್ರೀಂಕೋರ್ಟ್​​ ಅಂಗಳಕ್ಕೆ ತಲುಪಿದೆ. ಬಂಡಾಯ ನಾಯಕ ಏಕನಾಥ್​ ಶಿಂಧೆ ಅವರು ಸೇರಿದಂತೆ ಇತರ 15 ಶಾಸಕರನ್ನು ಅನರ್ಹಗೊಳಿಸಿರುವ ಶಿವಸೇನೆಯ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಪ್ರಕರಣದ ವಿಚಾರಣೆ ನಾಳೆ ನಡೆಯಲಿದೆ.
ತಮ್ಮನ್ನು ಪದಚ್ಯುತಗೊಳಿಸುವ ವಿಷಯ ನಿರ್ಧಾರವಾಗುವವರೆಗೆ ಅನರ್ಹತೆ ಅರ್ಜಿಯ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಂತೆ ಉಪ ಸ್ಪೀಕರ್‌ಗೆ ಆದೇಶ ನೀಡುವಂತೆ ಬಂಡಾಯ ಶಾಸಕರು ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ. ಅಲ್ಲದೆ ತಮ್ಮ ಕುಟುಂಬಗಳಿಗೆ ಭದ್ರತೆ ಒದಗಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆಯೂ ಅವರು ನ್ಯಾಯಾಲಯವನ್ನು ಕೋರಿದ್ದಾರೆ..ಉಪಸಭಾಪತಿ ನರಹರಿ ಜಿರ್ವಾಲ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿ ಅಜಯ್ ಚೌಧರಿ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿರುವುದನ್ನು ಏಕನಾಥ್ ಶಿಂಧೆ ನೇತೃತ್ವದ ರೆಬೆಲ್​ ಶಾಸಕರು ಪ್ರಶ್ನಿಸಿದ್ದಾರೆ.
16 ಶಾಸಕರನ್ನು ಅನರ್ಹಗೊಳಿಸುವಂತೆ ಶಿವಸೇನೆ ಉಪಸ್ಪೀಕರ್​ಗೆ ಮನವಿ ಸಲ್ಲಿಸಿದೆ. ಅಲ್ಲದೇ ಸೋಮವಾರ ಸಂಜೆಯೊಳಗೆ ಉತ್ತರಿಸುವಂತೆ ತಿಳಿಸಲಾಗಿದೆ. ಸದ್ಯ ಶಿವಸೇನೆಯ ಈ ಕ್ರಮವನ್ನು ಕಾನೂನು ಬಾಹಿರ ಎಂದಿರುವ ಶಿಂಧೆ ಪಾಳಯ, ಅನರ್ಹತೆಯ ವಿಷಯ ವಿಧಾನಸಭೆಯಲ್ಲಿನ ವಿಷಯಗಳಿಗೆ ಮಾತ್ರ ಸಂಬಂಧಿಸಿದ್ದು,ಪಕ್ಷದ ಸಭೆಗಲ್ಲ ಎಂದು ಹೇಳಿದೆ. ಸದ್ಯ ನಾಳೆ ಸುಪ್ರೀಂಕೋರ್ಟ್​ನಲ್ಲಿ ನಡೆಯಲಿರುವ ವಿಚಾರಣೆಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 8 =
Remember me
