ನವದೆಹಲಿ:ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ರೋಮಾಂಚಕ ಮತ್ತು ಭಾಗವಹಿಸಲು ಆಸಕ್ತಿದಾಯಕವನ್ನಾಗಿ ಮಾಡಿದ ಭಾರತದ ಚುನಾವಣಾ ಆಯೋಗವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ರಾಷ್ಟ್ರೀಯ ಮತದಾರರ ದಿನವಾದ ಇಂದು ಚುನಾವಣಾ ಆಯೋಗಕ್ಕೆ ಶುಭ ಕೋರಿ ಟ್ವೀಟ್​ ಮಾಡಿರುವ ಅವರು, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮತದಾರರಿಗೆ ಪ್ರೇರೇಪಿಸಬೇಕಿದೆ ಎಂದಿದ್ದಾರೆ.
ಪ್ರತಿವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತದೆ. ದಿನಾಚರಣೆಯಂದು ಚುನಾವಣೆಯಲ್ಲಿ ಭಾಗವಹಿಸುವಂತೆ ಪ್ರೆರೇಪಿಸುವುದು ಇದರ ಪ್ರಮುಖ ಉದ್ದೇಶ. ಚುನಾವಣಾ ಆಯೋಗವು ಗಣ ರಾಜ್ಯೋತ್ಸವದ ಮುನ್ನ ದಿನ 1950ರ ಜನವರಿ 25ರಂದು ಆರಂಭವಾಯಿತು.
ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಟ್ವೀಟ್​ ಮಹತ್ವ ಪಡೆದುಕೊಂಡಿದೆ. ಫೆಬ್ರವರಿ 8ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆಯಲು ಸೆಣಸಾಡುತ್ತಿದೆ. ಫೆಬ್ರವರಿ 11ರಂದು ಫಲಿತಾಂಶ ಹೊರಬೀಳಲಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
