ನವದೆಹಲಿ:ರಾಜ್ಯಸಭೆಯಲ್ಲಿ ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಜ್ಜಾಗಿದೆ. ಈ ಉಪಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಬುಧವಾರ ಬಿಡುಗಡೆ ಮಾಡಿದೆ. 9 ರಾಜ್ಯಗಳಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಈ ಉಪಚುನಾವಣೆ ನಡೆಯಲಿದೆ.
ಇದನ್ನೂ ಓದಿ:ಜೂ.ಎನ್‌ಟಿಆರ್ – ಪ್ರಶಾಂತ್ ನೀಲ್ ಚಿತ್ರಕ್ಕೆ ಮುಹೂರ್ತ ಫಿಕ್ಸ್​..!
ಅಸ್ಸಾಂ, ಬಿಹಾರ, ಹರಿಯಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ತ್ರಿಪುರಾ ರಾಜ್ಯಗಳಿಂದ 10 ಸದಸ್ಯರು ಲೋಕಸಭೆಗೆ ಆಯ್ಕೆಯಾದ ಕಾರಣ ಉಪಚುನಾವಣೆ ಅನಿವಾರ್ಯವಾಗಿತ್ತು. ಅಲ್ಲದೆ, ತೆಲಂಗಾಣ ಮತ್ತು ಒಡಿಶಾದ ಒಬ್ಬರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ ಕೇಂದ್ರ ಚುನಾವಣಾ ಆಯೋಗ ಚುನಾವಣೆ ನಡೆಸಲು ಸಿದ್ಧವಾಗಿದೆ.
ಆಯೋಗವು ಈ ಚುನಾವಣೆ ಸಂಬಂಧ ಆಗಸ್ಟ್ 14 ರಂದು ಅಧಿಸೂಚನೆ ಬಿಡುಗಡೆ ಮಾಡಲಿದೆ. ಆಗಸ್ಟ್ 21ರವರೆಗೆ ನಾಮಪತ್ರ ಸಲ್ಲಿಸಬಹುದು. ಅಸ್ಸಾಂ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ತ್ರಿಪುರಾದಲ್ಲಿ ನಾಮಪತ್ರ ಹಿಂಪಡೆಯಲು ಇದೇ ತಿಂಗಳ 26ರವರೆಗೆ ಗಡುವು ನೀಡಲಾಗಿದೆ. ಅಲ್ಲದೆ, ಬಿಹಾರ, ಹರಿಯಾಣ, ರಾಜಸ್ಥಾನ, ತೆಲಂಗಾಣ ಮತ್ತು ಒಡಿಶಾ ರಾಜ್ಯಗಳಲ್ಲಿ ನಾಮಪತ್ರ ಹಿಂಪಡೆಯಲು ಇದೇ ತಿಂಗಳ 27 ಕೊನೆಯ ದಿನಾಂಕ ಎಂದು ಘೋಷಿಸಲಾಗಿದೆ.
ರಾಜ್ಯಸಭಾ ಚುನಾವಣೆಗೆ ಸೆಪ್ಟೆಂಬರ್ 3 ರಂದು ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. ಅದೇ ದಿನ ಮತ ಎಣಿಕೆ ನಡೆಯಲಿದ್ದು, ಸಂಜೆ 5 ಗಂಟೆಯಿಂದ ಫಲಿತಾಂಶ ಪ್ರಕಟವಾಗಲಿದೆ.
ಒಟ್ಟು 12 ಸ್ಥಾನಗಳಲ್ಲಿ ಎನ್‌ಡಿಎ ಮೈತ್ರಿಕೂಟ 11ರಲ್ಲಿ ಗೆಲ್ಲುವ ಸಾಧ್ಯತೆ ಇದೆ. ಕಾಂಗ್ರೆಸ್ ತೆಲಂಗಾಣದಿಂದ ಒಂದು ಸ್ಥಾನವನ್ನು ಗೆಲ್ಲುವ ಅವಕಾಶವಿದೆ.
ವಿನೇಶ್ ಫೋಗಟ್ ಅನರ್ಹತೆ ಮರುಪರಿಶೀಲನೆಗೆ ಮೇಲ್ಮನವಿ: ಪಿಟಿ ಉಷಾ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:thirteen + 7 =
Remember me
