ನವದೆಹಲಿ:ದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಪ್ರದೇಶಗಳಲ್ಲಿ ಕರೊನಾ ಲಸಿಕೆ ಪಡೆದವರಿಗೆ ನೀಡಲಾಗುವ ಸರ್ಟಿಫಿಕೇಟ್​​ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಇರುವುದಿಲ್ಲ. ಚುನಾವಣಾ ಆಯೋಗ ನೀಡಿದ ನಿರ್ದೇಶನದ ಹಿನ್ನೆಲೆಯಲ್ಲಿ ಕೋ-ವಿನ್ ಪೋರ್ಟಲ್​ಗೆ ಅಗತ್ಯ ಬದಲಾವಣೆಗಳನ್ನು ಮಾಡಲಾಗಿದೆ.
ಚುನಾವಣೆ ನಡೆಯಲಿರುವ ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೆರಿ ಕೇಂದ್ರಾಡಳಿತ ಪ್ರದೇಶದಲ್ಲಿ ಕೋ-ವಿನ್ ಮೂಲಕ ನೀಡಲಾಗುವ ಪ್ರಮಾಣ ಪತ್ರಗಳಲ್ಲಿ ಪ್ರಧಾನಿ ಫೋಟೋಅನ್ನು ಮರೆಮಾಡಲಾಗುವುದು. ಇದಕ್ಕಾಗಿ ಅಗತ್ಯ ಫಿಲ್ಟರ್​ಗಳನ್ನು ಕೋ-ವಿನ್ ಪೋರ್ಟಲ್​ನಲ್ಲಿ ಅಳವಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ:ಕೋ-ವಿನ್ ಸರ್ಟಿಫಿಕೇಟ್​ : ಟಿಎಂಸಿ ಕಣ್ಣು ಕುಕ್ಕಿದ ಪ್ರಧಾನಿ ಮೋದಿ ಫೋಟೋ !
ಚುನಾವಣೆಯಲ್ಲಿ ಪ್ರಮುಖ ಸ್ಪರ್ಧಿಯಾದ ಬಿಜೆಪಿಯ ಸ್ಟಾರ್ ಕಾಂಪೇನರ್​ ಆದ ಮೋದಿ ಅವರ ಚಿತ್ರವು ಕರೊನಾ ಫಲಾನುಭವಿಗಳಿಗೆ ನೀಡುವ ಸರ್ಟಿಫಿಕೇಟ್​​ನಲ್ಲಿದ್ದರೆ ಅವರಿಗೆ ಅನಗತ್ಯ ಪ್ರಚಾರ ಸಿಗುತ್ತದೆ. ಆದ್ದರಿಂದ ಇದು ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಈ ಮುನ್ನ ಟಿಎಂಸಿ ದೂರು ನೀಡಿತ್ತು.
ಈ ದೂರನ್ನು ಪುರಸ್ಕರಿಸಿದ್ದ ಚುನಾವಣಾ ಆಯೋಗವು ಚುನಾವಣೆ ನಡೆಯುತ್ತಿರುವ ಪ್ರದೇಶಗಳಲ್ಲಿ ಕೋ-ವಿನ್ ಸರ್ಟಿಫಿಕೇಟ್​ಗಳಲ್ಲಿ ಮೋದಿ ಫೋಟೋ ಬಳಸುವುದನ್ನು ನಿಲ್ಲಿಸಲು ಮಾರ್ಚ್​ 6 ರಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದೀಗ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.(ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಮಮತಾ ಬ್ಯಾನರ್ಜಿಗೆ ಏಟು ಬಿದ್ದಿದ್ದು ಹೇಗೆ ? ಘಟನೆ ಒಂದು, ಕಥೆಗಳು ಹಲವು !
VIDEO| ‘ಇದಪ್ಪಾ ನಿಜವಾದ ಕ್ರಿಕೆಟ್​ !’ ಮೈಕೆಲ್ ವಾಘನ್ ಶೇರ್​ ಮಾಡಿದ ವಿಡಿಯೋ ನೋಡಿ

ಹೆಚ್ಚಿದ ಕರೊನಾ : ಮದುವೆ ಸಮಾರಂಭಗಳಿಗೆ ಪೊಲೀಸರಾಗಲಿದ್ದಾರೆ ವಿಶೇಷ ಅತಿಥಿಗಳು !


ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − fourteen =
Remember me
