ನವದೆಹಲಿ:ಭಾರತೀಯ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಎಲೆಕ್ಟೋರಲ್ ಬಾಂಡ್​ ಮಹತ್ವದ ಸಂಗತಿಯಾಗಿದ್ದು, ಇತ್ತೀಚೆಗೆ ಇದು ಬಹಳ ಚರ್ಚೆಯಲ್ಲಿದೆ. ಈ ಮಧ್ಯೆ ಇದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಮಹತ್ವದ ನಿರ್ದೇಶನವನ್ನು ನೀಡಿದೆ.
ರಾಜಕೀಯ ಪಕ್ಷಗಳಿಗೆ ಎಲೆಕ್ಟೋರಲ್ ಬಾಂಡ್​ ನೀಡುವ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​​ನಲ್ಲಿ ಇಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್​ ಅವರನ್ನೊಳಗೊಂಡ ಪಂಚಸದಸ್ಯ ಪೀಠ ವಿಚಾರಣೆ ನಡೆಸಿದೆ.
ರಾಜಕೀಯ ಪಕ್ಷಗಳಿಗೆ ಎಲೆಕ್ಟೋರಲ್ ಬಾಂಡ್​ಗಳ ಮೂಲಕ ಅನಾಮಧೇಯವಾಗಿ ಫಂಡ್ ಸ್ವೀಕರಿಸುವಂಥ ಕೇಂದ್ರ ಸರ್ಕಾರದ ಎಲೆಕ್ಟೋರಲ್ ಬಾಂಡ್ ಸ್ಕೀಮ್​ಗೆ ಸಂಬಂಧಿಸಿದಂತೆ ವಾದಗಳನ್ನು ಆಲಿಸಿರುವ ಪೀಠ ತನ್ನ ತೀರ್ಪನ್ನು ಕಾಯ್ದಿರಿಸಿದೆ.
ಇದನ್ನೂ ಓದಿ:ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?
ಆದರೆ ಭಾರತೀಯ ಚುನಾವಣಾ ಆಯೋಗಕ್ಕೆ ಮಹತ್ವದ ನಿರ್ದೇಶನವೊಂದನ್ನು ನೀಡಿದೆ. ಎಲ್ಲ ರಾಜಕೀಯ ಪಕ್ಷಗಳು ಸೆ. 30ರ ವರೆಗೆ ಎಲೆಕ್ಟೋರಲ್ ಬಾಂಡ್ ರೂಪದಲ್ಲಿ ಸ್ವೀಕರಿಸಿರುವ ಫಂಡ್ ವಿವರವನ್ನು ಮುಚ್ಚಿದ ಲಕೋಟೆಯಲ್ಲಿ 2 ವಾರಗಳ ಒಳಗಾಗಿ ನೀಡುವಂತೆ ಆಯೋಗಕ್ಕೆ ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ.
ಇದನ್ನೂ ಓದಿ:ನಟ ದರ್ಶನ್ ವಿರುದ್ಧ ದೂರು ಕೊಟ್ಟ ಮಹಿಳೆ​: ಹರಿದುಹೋದ ಬಟ್ಟೆ, ಹೊಟ್ಟೆಗೆ ಗಾಯ!
ಸಿಜೆಐ ಡಿ.ವೈ. ಚಂದ್ರಚೂಡ್ ಅವರ ಜೊತೆಗೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ.ಆರ್. ಗವಾಯ್, ಜೆ.ಬಿ. ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪಂಚಪೀಠ ಈ ನಿರ್ದೇಶನವನ್ನು ನೀಡಿದೆ.
ಬಾಲಕನ ಹುಟ್ಟುಹಬ್ಬದ ಮುನ್ನಾದಿನವೇ ಸಂಸಾರ ಸರ್ವನಾಶ; ಸಮಾಧಿ ಮೇಲೆ ಬರ್ತ್​ಡೇ ಗಿಫ್ಟ್​​ಗಳನ್ನಿಟ್ಟ ಅಜ್ಜ-ಅಜ್ಜಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 2 =
Remember me
