ಕೋಲ್ಕತ: ಪಶ್ಚಿಮ ಬಂಗಾಳದ ಅಲಿಪುರ್ದುರ್ ಜಿಲ್ಲೆಯ ಜಲ್ದಪರಾ ರಾಷ್ಟ್ರೀಯ ಉದ್ಯಾನದಲ್ಲಿ ಬುಧವಾರ ಆನೆ ಮರಿ ವಿದ್ಯುದಾಘಾತದಿಂದ ಸಾವಿಗೀಡಾಗಿದೆ.ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಆನೆಗಳ ಹಿಂಡೊಂದು ಜಲ್ದಪರಾ ಅರಣ್ಯದ ಉತ್ತರ ಶ್ರೇಣಿಯಿಂದ ಬಂದು ಪೂರ್ವ ಮದರಿಹಾರ್ ಪ್ರದೇಶದ ಬಳಿ ಅಡಿಕೆ ತೋಟವನ್ನು ಪ್ರವೇಶಿಸಿತು.
ಇದನ್ನೂ ಓದಿ:ಕೋವಿಡ್-19: ಒಂದೇ ದಿನದಲ್ಲಿ 2 ಲಕ್ಷಕ್ಕೂ ಹೆಚ್ಚು ಮಾದರಿಗಳ ಪರೀಕ್ಷೆ; ಭಾರತದ ಸಾಧನೆ
ಅದೇ ವೇಳೆ, ಮರ ಉರುಳಿ ವಿದ್ಯುತ್ ತಂತಿ ಹರಿಯಿತು. ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ಸ್ಪರ್ಶದಿಂದಾಗಿ ಆನೆ ಮರಿ ವಿದ್ಯುದಾಘಾತಕ್ಕೊಳಗಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನಂತರ ಗ್ರಾಮಸ್ಥರು ಮುಂದಾಗಬಹುದಾದ ಅನಾಹುತ ತಪ್ಪಿಸಲು, ಸ್ಥಳೀಯ ಅರಣ್ಯಾಧಿಕಾರಿಗಳಿಗೆ ತಿಳಿಸುವ ಮೊದಲು ಆನೆ ಹಿಂಡನ್ನು ಮತ್ತೆ ಅರಣ್ಯದತ್ತ ಓಡಿಸಿದರು.
ಇದನ್ನೂ ಓದಿ:ಗುಡ್ ನ್ಯೂಸ್…! ಒಂದು ಕೋಟಿ ಜನರಿಗೆ ಉದ್ಯೋಗ ನೀಡುವ ಮೂಲಕ ಹೊಸ ದಾಖಲೆ ನಿರ್ಮಿಸಲು ಮುಂದಾಗಿದೆ ಈ ರಾಜ್ಯ
ಜೂನ್ 16 ರಿಂದ ಪೂರ್ವ ಹಿಮಾಲಯದ ತಪ್ಪಲಿನಲ್ಲಿರುವ ಪ್ರದೇಶದಲ್ಲಿ ಆನೆ ಸಾವನ್ನಪ್ಪಿದ ಮೂರನೇ ಘಟನೆ ಇದಾಗಿದೆ. ಇದಕ್ಕೂ ಮೊದಲು ಬಕ್ಸಾ ಅರಣ್ಯ ಪ್ರದೇಶದ ನೂರ್ಪುರ್ ಗ್ರಾಮದಲ್ಲಿ ಆನೆಯೊಂದು ಸಾವಿಗೀಡಾಗಿತ್ತು.ಇತ್ತೀಚೆಗೆ ಆನೆಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕೇಂದ್ರ ಸರ್ಕಾರ ವನ್ಯಜೀವಿಗಳ ರಕ್ಷಣೆಗೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಇಂದಿನ ಅಗತ್ಯವಾಗಿದೆ.
ಗುಜರಾತ್ ಕೈಗಾರಿಕಾ ಅಭಿವೃದ್ಧಿ ನಿಗಮದ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − fifteen =
Remember me
