ನವದೆಹಲಿ:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಬುಧವಾರ ತಡರಾತ್ರಿ ದೆಹಲಿಯಲ್ಲಿ ಭೇಟಿ ಆಗಿ ಮಾತುಕತೆ ನಡೆಸಿದ್ದಾರೆ.
ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ್ದು, ಮುಂದಿನ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ಬಿಜೆಪಿ ಜತೆ ತೆಲುಗುದೇಶಂ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತುಗಳೂ ಕೇಳಿಬರಲಾರಂಭಿಸಿವೆ.
ಅಮಿತ್ ಷಾ ನಿವಾಸದಲ್ಲಿ ಈ ಭೇಟಿ ನಡೆದಿದ್ದು, ಈ ಸಂದರ್ಭದಲ್ಲಿ ಜೆ.ಪಿ. ನಡ್ಡಾ ಕೂಡ ಇದ್ದರು ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ನಾಯ್ಡು ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟಕ್ಕೆ ಮರಳಿದರೆ ಅವರು ಎನ್​ಡಿಎಯಲ್ಲಿನ ಎರಡನೇ ದೊಡ್ಡ ಪ್ರಾದೇಶಿಕ ನಾಯಕ ಎನಿಸಿಕೊಳ್ಳಲಿದ್ದಾರೆ. ಮೊದಲ ಸ್ಥಾನದಲ್ಲಿ ಇತ್ತೀಚೆಗಷ್ಟೇ ಎನ್​ಡಿಎ ಜತೆ ಮೈತ್ರಿ ಮಾಡಿಕೊಂಡ ಜೆಡಿಯು ನಾಯಕ, ಬಿಹಾರ ಸಿಎಂ ನಿತೀಶ್ ಕುಮಾರ್ ಇದ್ದಾರೆ.
ನಾಯ್ಡು ಬಿಜೆಪಿಯೊಂದಿಗೆ ಕೈಜೋಡಿಸಲು ಉತ್ಸುಕರಾಗಿದ್ದಾರೆ ಮತ್ತು ವೈಎಸ್​ಆರ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿನ ಮೈತ್ರಿ ಎನ್​ಡಿಎಗೂ ಅನುಕೂಲಕರವಾಗಲಿದೆ ಎಂದು ಆಡಳಿತ ಪಕ್ಷದ ಕೆಲವರ ಅಭಿಪ್ರಾಯವಾಗಿದೆ ಎಂದು ನಾಯ್ಡು ಕಡೆಯ ಮೂಲಗಳಿಂದ ತಿಳಿದುಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370 ಹಾಗೂ ಎನ್​ಡಿಎ 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಪ್ರಧಾನಿ ಮೋದಿ ಹೇಳಿರುವ ಹಿನ್ನೆಲೆಯಲ್ಲಿ ಕೂಡ ಈ ಭೇಟಿ ಮಹತ್ವದ್ದು ಎನಿಸಿಕೊಂಡಿದೆ.
ಸಿನಿಮಾದಲ್ಲಿ ಸ್ವಲ್ಪವೂ ಮೈಮಾಟ ಪ್ರದರ್ಶಿಸದ ನಟಿಯ ಅಸಲಿ ಅವತಾರ ಬಯಲು! ಹಾಟ್​ ಫೋಟೋ ವೈರಲ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − 3 =
Remember me
