ಜೈಪುರ:ಉತ್ತರಪ್ರದೇಶದ ನೋಯ್ಡಾದಲ್ಲಿ ರೇವ್​ ಪಾರ್ಟಿ ಆಯೋಜನೆ ಮಾಡಿದ ಆರೋಪದ ಮೇಲೆ ಹಿಂದಿ ಬಿಗ್​ ಬಾಸ್​ ಸೀಸನ್​-2 ವಿನ್ನರ್​ ಎಲ್ವಿಶ್​ ಯಾದವ್ ಉತ್ತರಪ್ರದೇಶ ಪೊಲೀಸರು ಈವರೆಗೂ ಬಂಧಿಸದೆ ಇರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಇದೀಗ ಎಲ್ವಿಶ್​ ಯಾದವ್​ನನ್ನು ರಾಜಸ್ಥಾನದ ಕೋಟಾದಲ್ಲಿ ಬಂಧಿಸಿದ ಪೊಲೀಸರು ವಿಚಾರಣೆ ಬಳಿಕ ಬಿಟ್ಟು ಕಳುಹಿಸಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರ ನಡೆ ಸಾಕಷ್ಟು ಖಂಡನೆಗೆ ಗುರಿಯಾಗಿದೆ.
“राजस्थान में चुनाव के चलते आचार संहिता लगी है ऐसे में#ElvishYadavकी गाड़ी की सामान्य चेकिंग की गई थी.नोएडा पुलिस से बात करके@ElvishYadavको छोड़ दिया है, उन्होंने बताया कि अभी वो अभियुक्त नहीं है”.: विष्णु, SHO, सुकेत पुलिस स्टेशन, कोटा, राजस्थान#ElvishaYadav#Kotapic.twitter.com/M2zeAUFswh
ಇದನ್ನೂ ಓದಿ:ಚುನಾವಣೆಯ ಹೊಸ್ತಿಲಲ್ಲಿ ನಿವೃತ್ತಿಯ ಮಾತುಗಳನ್ನಾಡಿದ ವಸುಂಧರಾ ರಾಜೇ; ಕಾರಣ ಹೀಗಿದೆ
ರಾಜಸ್ಥಾನದ ಕೋಟಾದಲ್ಲಿ ಚುನಾವಣೆ ಕರ್ತವ್ಯದ ವೇಳೆ ಪೊಲೀಸ್​ ಅಧಿಕಾರಿಗಳೆ ಅನುಮಾನದ ಮೇರೆಗೆ ಎಲ್ವಿಶ್​ ಯಾದವ್​ ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಬಳಿಕ ಅನುಮಾನದ ಮೇರೆಗೆ ಆತನನ್ನು ವಶಕ್ಕೆ ಪಡೆದು ನೋಯ್ಡಾ ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಅಲ್ಲಿನ ಪೊಲೀಸ್​ ಅಧಿಕಾರಿಗಳು ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮೇಲಿರುವ ಆರೋಪಗಳು ಇನ್ನು ಸಾಬೀತಾಗಿಲ್ಲ ಬಂಧಿಸುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ. ವಿಚಾರಣೆ ನಡೆಸಿ ನೋಯ್ಡಾ ಪೊಲೀಸರ ಶಿಫಾರಸ್ಸಿನ ಮೇರೆಗೆ ಬಿಟ್ಟು ಕಳುಹಿಸಿದ್ದೇವೆ ಎಂದು ಕೋಟಾ ಜಿಲ್ಲೆಯ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತ ರೇವ್​ ಪಾರ್ಟಿಗೆ ಸಂಬಂಧಿಸಿದಂತೆ ಪ್ರಕರಣದ ಮುಖ್ಯ ಆರೋಪಿ ಎಲ್ವಿಶ್​ ಯಾದವ್​ ವಿರುದ್ಧ ಮಾಡಲಾಗಿರುವ ಆರೋಪಗಳು ಈವರೆಗೆ ಸಾಬೀತಾಗಿಲ್ಲ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ರೇವ್​ ಪಾರ್ಟಿಯಲ್ಲಿ ಎಲ್ವಿಶ್​ ಪಾತ್ರದ ಕುರಿತು ಸ್ಪೋಟಕ ಮಾಹಿತಿಯನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಎಲ್ವಿಶ್​ ವಿರುದ್ಧ ಸಾಕಷ್ಟು ಕ್ರಿಮಿನಲ್​ ಮೊಕದ್ದಮೆಗಳು ದಾಖಲಾಗಿದ್ದು, ಪ್ರಭಾವಿಗಳು ಈತನ ಬೆನ್ನಿಗೆ ನಿಂತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಹಲವು ಪ್ರಶ್ನೆಗಳು ಉದ್ಭವಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
