ಫಾರೂಖಾಬಾದ್:ಬಥಾಮ್ ಎಂಬ ವ್ಯಕ್ತಿಯನ್ನು ಪೊಲೀಸರು ಗುರುವಾರ ರಾತ್ರಿ ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ್ದಾರೆ. ಬಳಿಕ ಆತನ ಪತ್ನಿ ಸ್ಥಳದಿಂದ ಪರಾರಿಯಾಗುವಾಗ ಸಾರ್ವಜನಿಕರಿಂದ ಹಲ್ಲೆಗೆ ಒಳಗಾಗಿ ಮೃತಪಟ್ಟಿದ್ದಾಳೆ.
ಸುಭಾಷ್ ಬಥಾಮ್ 2001ರಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದ. ಸುಭಾಷ್ ಗುರುವಾರ ರಾತ್ರಿ ತನ್ನ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಗ್ರಾಮದ 23 ಮಕ್ಕಳನ್ನು ಮನೆಗೆ ಕರೆಸಿಕೊಂಡಿದ್ದ.
ಬಳಿಕ ಮಕ್ಕಳನ್ನು ಕೊಠಡಿಯಲ್ಲಿ ಕೂಡಿಹಾಕಿ ಬೀಗ ಹಾಕಿದ್ದ. ತಮ್ಮ ಮಕ್ಕಳು ಮನೆಗೆ ಹಿಂದಿರುಗದಿದ್ದರಿಂದ ಅನುಮಾನಗೊಂಡ ಮಕ್ಕಳ ಪಾಲಕರು ಆತನ ಮನೆಗೆ ಬಂದು ಬಾಗಿಲು ಬಡಿದರೂ ಆತ ತೆಗೆದಿರಲಿಲ್ಲ. ಈ ವೇಳೆ ತನ್ನ ಬಳಿ ಇದ್ದ ಪಿಸ್ತೂಲ್​ನಿಂದ ಜನರ ಮೇಲೆ ಗುಂಡು ಹಾರಿಸಲೂ ಯತ್ನಿಸಿದ್ದ. ಬಳಿಕ ಸ್ಥಳಕ್ಕೆ ಬಂದ ಪೊಲೀಸರ ಮೇಲೂ ಕಿಟಕಿಯಿಂದ ಗುಂಡಿನ ದಾಳಿಗೆ ಪ್ರಯತ್ನಿಸಿದ್ದ.
ಸುಭಾಷ್​ನ ಹುಚ್ಚಾಟದಿಂದಾಗಿ ಮಕ್ಕಳು ಮತ್ತು ಪಾಲಕರು ತೀವ್ರ ಆತಂಕಕ್ಕೆ ಸಿಲುಕಿದ್ದರು. ಸುಮಾರು 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳದ ಕಮಾಂಡೊಗಳು ಮತ್ತು ಪೊಲೀಸರು ತಡರಾತ್ರಿ ಆತನನ್ನು ಎನ್​ಕೌಂಟರ್ ಮಾಡಿದ್ದಾರೆ. ಬಳಿಕ ಮಕ್ಕಳನ್ನು ಸುರಕ್ಷಿತವಾಗಿ ಅವರ ಪಾಲಕರಿಗೆ ಒಪ್ಪಿಸಲಾಗಿದೆ.
ಪತ್ನಿಗೆ ಥಳಿತ, ಸಾವು
ಘಟನೆ ವೇಳೆ ಮನೆಯಿಂದ ಪರಾರಿಯಾಗಲು ಯತ್ನಿಸಿದ ಸುಭಾಷ್ ಪತ್ನಿಯನ್ನು ಸಾರ್ವಜನಿಕರೇ ತೀವ್ರವಾಗಿ ಥಳಿಸಿ, ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ನಂತರ ಮೃತಪಟ್ಟಿದ್ದಾಳೆ. ಸುಭಾಷ್ ಗುರುವಾರ ರಾತ್ರಿ ತೀವ್ರ ಮದ್ಯಪಾನ ಮಾಡಿದ್ದು, ಮಕ್ಕಳನ್ನು ಒತ್ತೆಯಾಳಾಗಿಟ್ಟುಕೊಂಡು ‘ನಾನು ನಿರಪರಾಧಿ, ಅನವಶ್ಯಕವಾಗಿ ನನ್ನನ್ನು ಕೊಲೆ ಪ್ರಕರಣದಲ್ಲಿ ಸಿಲುಕಿಸಲಾಗಿದೆ’ ಎಂದು ಮಾನಸಿಕ ಸ್ಥಿಮಿತ ಕಳೆದುಕೊಂಡು ಅರಚಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 19 =
Remember me
