ಕಲ್ಕತ್ತಾ:ಪಡಿತರ ವಿತರಣೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಅರಣ್ಯ ಸಚಿವ ಜ್ಯೋತಿಪ್ರಿಯ ಮಲ್ಲಿಕ್​ ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಕಲ್ಕತ್ತಾದ ಸಾಲ್ಟ್​ ಲೇಕ್​ನಲ್ಲಿರುವ ಅವರ ನಿವಾಸದ ಮೇಲೆ ದಾಳಿ ಮಾಡಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಅವರನ್ನು ವಶಕ್ಕೆ ಪಡೆದಿದ್ದಾರೆ.
#WATCH| Kolkata: West Bengal minister Jyotipriya Mallick has been arrested by ED in connection with an alleged case of corruption in rationing distribution.He says, "I am the victim of a grave conspiracy."pic.twitter.com/gARyddVT41
ಇದನ್ನೂ ಓದಿ:ಧಾರ್ಮಿಕ ಭಾವನೆಗೆ ಧಕ್ಕೆ; ಪ್ರಿಯಾಂಕ ಗಾಂಧಿಗೆ ಶೋಕಾಸ್ ನೋಟಿಸ್ ಜಾರಿ
ತಮ್ಮನ್ನು ಬಂಧಿಸಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಜ್ಯೋತಿಪ್ರಿಯ ಮಲ್ಲಿಕ್ ನನ್ನ ವಿರುದ್ಧ ಸಂಚು ಹೆಣೆಯಲಾಗಿದ್ದು, ಇದು ದ್ವೇಷ ರಾಜಕಾರಣಕ್ಕೆ ಸ್ಪಷ್ಟ ಉದಾಹರಣೆ ಎಂದು ಕಿಡಿಕಾರಿದ್ದಾರೆ.
ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಈ ಹಿಂದೆ ಆಹಾರ ಸಚಿವರಾಗಿದ್ದ ಜ್ಯೋತಿಪ್ರಿಯೊ ಮಲ್ಲಿಕ್ ಅವರ ಮಾಜಿ ಆಪ್ತ ಸಹಾಯಕ ಸೇರಿದಂತೆ 8 ಮಂದಿಯ ಮನೆಗಳ ಮೇಲೆ ದಾಳಿ ಮಾಡಲಾಗಿತ್ತು. ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಈಗಾಗಲೇ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + seventeen =
Remember me
