ನವದೆಹಲಿ:ಕೋವಿಡ್​-19 ಪಿಡುಗಿನ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್​ ಮತ್ತು ವೈದ್ಯಕೀಯ ಶಿಕ್ಷಣದ ಮೊದಲ ವರ್ಷದ ಶಿಕ್ಷಣ ನವೆಂಬರ್​ನಿಂದ ಹಾಗೂ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮತ್ತು ರಾಷ್ಟ್ರೀಯ ತಂತ್ರಜ್ಞಾನ (ಎನ್​ಐಟಿ) ಕಾಲೇಜುಗಳ ಮೊದಲ ವರ್ಷದ ಶಿಕ್ಷಣ ಡಿಸೆಂಬರ್​ನಲ್ಲಿ ಆರಂಭವಾಗುವ ಸಾಧ್ಯತೆ ಇದೆ.
ಕೋವಿಡ್​-19 ಪಿಡುಗಿನ ಹಿನ್ನೆಲೆಯಲ್ಲಿ ಪ್ರವೇಶ ಪರೀಕ್ಷೆಗಳು ವಿಳಂಬವಾಗಿರುವ ಕಾರಣ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಕೂಡ ವಿಳಂಬವಾಗುತ್ತಿದೆ. ಇದರಿಂದಾಗಿ ಎಂಬಿಬಿಎಸ್​ ಮತ್ತು ಬಿಡಿಎಸ್​ಗಳ ಪ್ರವೇಶ ಕಾರ್ಯಕ್ರಮದ ಪರಿಷ್ಕೃತ ದಿನಾಂಕವನ್ನು ಕೇಂದ್ರ ಆರೋಗ್ಯ ಸಚಿವಾಲಯ ನಿಗದಿಪಡಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಅಗೆದಷ್ಟೂ, ಬಗೆದಷ್ಟೂ ಚಿನ್ನ, ವಜ್ರ,ಠೇವಣಿ- ನೀರವ್‌ ಮೋದಿಯ ಮತ್ತಷ್ಟು ಆಸ್ತಿ ಜಪ್ತಿ
ಇದೇ ವೇಳೆ ಐಐಟಿ ಸೇರಿ ಎಲ್ಲ ರಾಜ್ಯಗಳ ವಿಶ್ವವಿದ್ಯಾಲಯಗಳು ಕೂಡ ಮೊದಲ ವರ್ಷದ ಪ್ರವೇಶಕ್ಕೆ ಹೊಸ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುತ್ತಿವೆ ಎಂದು ಹೇಳಿದ್ದಾರೆ.
ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜೆಇಇ ಮೇನ್​ ಪರೀಕ್ಷೆಯನ್ನು ಸೆಪ್ಟೆಂಬರ್​ 1ರಿಂದ 6ವರೆಗೆ ನಡೆಸಿದ 10 ಅಥವಾ 11ರಂದು ಫಲಿತಾಂಶ ಪ್ರಕಟಿಸಲಿದೆ. ಇದಾದ ಬಳಿಕ ಮೊದಲ ವರ್ಷದ ಬಿಟೆಕ್​ ಪ್ರವೇಶದ ಕೌನ್ಸೆಲಿಂಗ್​ ಹಾಗೂ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ.
ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ನೀಟ್​ ಪರೀಕ್ಷೆಯನ್ನು ಸೆ.13ರಂದು ಆಯೋಜಿಸಲಾಗುತ್ತಿದೆ. ಫಲಿತಾಂಶ ಪ್ರಕಟಿಸಲು ಕನಿಷ್ಠ 15ರಿಂದ 20 ದಿನಗಳು ಬೇಕಾಗುತ್ತವೆ. ಆದ್ದರಿಂದ ಅಕ್ಟೋಬರ್​ ಮಧ್ಯ ಭಾಗದಿಂದ ಸೀಟುಗಳ ಹಂಚಿಕೆ ಪ್ರಕ್ರಿಯೆ ನಡೆಸಲಾಗುವುದು. ಅಂದರೆ ಮೊದಲ ವರ್ಷದ ತರಗತಿಗಳು ನವೆಂಬರ್​ನಿಂದ ಆರಂಭವಾಗಲಿವೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಪತಿ ಮೇಲೆ ಹಲ್ಲೆ ನಡೆಸಿದ ಪೊಲೀಸ್​​ಗೆ ಮಹಿಳೆ ಕಪಾಳಮೋಕ್ಷ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one + 10 =
Remember me
